ಶಿವಮೊಗ್ಗ:ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಿಂದ ಪ್ರಕ್ಷುಬ್ಧಗೊಂಡಿರುವ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ರಾತ್ರಿಯಿಂದ ನಾಡಿದ್ದು ಬೆಳಗ್ಗೆ ಆರು ಗಂಟೆವರೆಗೆ ಸೆಕ್ಷನ್​ 144 ಜಾರಿಯಲ್ಲಿ ಇರಲಿದೆ ಎಂದು ಶಿವಮೊಗ್ಗ ಎಸ್​ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ. ನಾಳೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶವಿಲ್ಲ ಎಂದಿರುವ ಅವರು, ಅಗತ್ಯ ಬಿದ್ದರೆ ನಿಷೇಧಾಜ್ಞೆ ಮುಂದುವರಿಸುವುದಾಗಿಯೂ ಹೇಳಿದ್ದಾರೆ.
ಇದನ್ನೂ ಓದಿ:ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ
ನಗರದಲ್ಲಿ ಶಾಂತಿ ಕಾಪಾಡಲು ಎಲ್ಲ ರೀತಿಯ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಭದ್ರತೆಗಾಗಿ ಇಂದು ರಾತ್ರಿಯೇ 400ಕ್ಕೂ ಹೆಚ್ಚು ಪೊಲೀಸರು ಆಗಮಿಸಲಿದ್ದಾರೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ. ಮತ್ತೊಂದೆಡೆ ಶಾಂತಿ-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಳೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ‌ ಮಾಡಲಾಗಿದೆ.
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…

ಪರಪುರುಷನೊಂದಿಗೆ ಓಡಿಹೋದ ಪತ್ನಿ; ನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 3 =
Remember me
