ಮಂಡ್ಯ:ಕೆಲಸವನ್ನು ಬದಿಗಿಟ್ಟು ಠಾಣೆಯಲ್ಲಿದ್ದ ಎಲ್ಲ ಪೊಲೀಸ್ ಸಿಬ್ಬಂದಿ ಕಾರ್ಯಕ್ರಮವೊಂದರ ಸಿದ್ಧತೆಯಲ್ಲಿದ್ದರು. ಕಾರಣ ತಮ್ಮ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರ ಸೀಮಂತ ಕಾರ್ಯ. ಕೆ.ಆರ್​. ಪೇಟೆಯ ಟೌನ್ ಪೊಲೀಸ್ ಠಾಣೆಯ ಪೊಲೀಸರೆಲ್ಲರು ಸೇರಿಕೊಂಡು ಠಾಣೆಯಲ್ಲಿ ತುಂಬು ಗರ್ಭಿಣಿಯರಿಗೆ ಬಾಗಿನ ನೀಡಿ, ಸೀಮಂತ ಕಾರ್ಯದ ಮೂಲಕ ಹೆರಿಗೆಗೆ ಬೀಳ್ಕೋಟ್ಟಿದ್ದಾರೆ.

ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಮಡಿಲಕ್ಕಿ ತುಂಬಿ ಸೀಮಂತ ಮಾಡುವ ಮೂಲಕ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆ ಎಲ್ಲರ ಗಮನ ಸೆಳೆದಿದೆ. ಶಾರದಾ ಮತ್ತು ಅಸ್ಮಬಾನು ಎಂಬ ಮಹಿಳಾ ಪೇದೆಗಳಿಗೆ ಸೀಮಂತ ಕಾರ್ಯ ಮಾಡಿ, ಶುಭ ಹಾರೈಸಿ ಪೋಲಿಸ್ ಇನ್ಸ್​ಪೆಕ್ಟರ್​​ ಸುಮಾರಾಣಿ ಅವರು ಬೀಳ್ಕೊಟ್ಟಿದ್ದಾರೆ.
ಠಾಣೆಯ ಎಲ್ಲ ಸಿಬ್ಬಂದಿ ಸೇರಿ ಇಬ್ಬರು ಮಹಿಳಾ ಪೇದೆಗಳಿಗೆ ಉಡಿ ತುಂಬಿ, ಮಡಿಲಕ್ಕಿ ಹಾಕಿ, ಕೊಬ್ಬರಿ ಬೆಲ್ಲ, ತೆಂಗಿನಕಾಯಿ, ಅರಿಶಿಣ-ಕುಂಕುಮ ಹಾಗೂ ಬಳೆಗಳನ್ನು ನೀಡಿ, ಕೆಲಸದ ಒತ್ತಡದ ನಡುವೆಯೂ ಅರ್ಥಪೂರ್ಣವಾಗಿ ಸೀಮಂತ ಕಾರ್ಯ ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಯುವಕನ ಕೊಲೆತಿಪಟೂರು ನಗರದ ಕೆ.ಆರ್.ಬಡಾವಣೆಯಲ್ಲಿ ಶನಿವಾರ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಹೊಸಕೆರೆಯ ಮಹೇಂದ್ರ(34) ಎಂಬುವವನ ಮೃತದೇಹ ಪತ್ತೆಯಾಗಿದ್ದು ಕೊಲೆ ಎಂದು ಶಂಕಿಸಲಾಗಿದೆ. ಶನಿವಾರ ಬೆಳಗ್ಗೆ ಈತನ ತೊಡೆಯ ಭಾಗದಲ್ಲಿ ಚಾಕುವಿನಿಂದ ಇರಿಯಲಾಗಿದ್ದು ತೀವ್ರ ರಕ್ತಸ್ರಾವದಿಂದ ಬಿದ್ದು ಒದ್ದಾಡಿದ್ದಾನೆ, ಚೀರಾಟ ಗಮನಿಸಿದ ಸ್ಥಳೀಯರು 108 ಆಂಬುಲೆನ್ಸ್ಗೆ ಕರೆ ಮಾಡಿದರೂ ಪ್ರಾಣ ಹೋಗಿದೆ.
ಮೃತನ ಬಳಿಯಿಂದ ಬ್ಯಾಗ್‌ನಲ್ಲಿದ್ದ ಕಾಗದಗಳಿಂದ ವಿಳಾಸ ಪತ್ತೆಯಾಗಿದೆ, ನಗರಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಗೋವಾದಲ್ಲಿ ಮೋಜು ಮಾಡಿ, ಮದ್ಯಪಾನ ಮಾಡಬೇಡಿ: ಕ್ರೀಡಾಪಟುಗಳಿಗೆ ಕಿವಿ ಮಾತು ಹೇಳಿದ ಮಾಜಿ ಮುಖ್ಯಮಂತ್ರಿ

VIDEO | 2 ಕೋಟಿ ರೂ. ಬೆಲೆ ಫ್ಲಾಟ್​​ ಖರೀದಿಗೆ ರಾತ್ರಿ 8 ತಾಸು ರಸ್ತೇಲಿ ಸರತಿ ಸಾಲಿನಲ್ಲಿ ನಿಂತ ಜನ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twelve − 4 =
Remember me
