ಬೆಂಗಳೂರು:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಯೋಜನೆಗಳಿಗೆ ಜುಲೈ ತಿಂಗಳೊಳಗಾಗಿ ಫಲಾನುಭವಿಗಳ ಆಯ್ಕೆಯನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 2022-23ರ ಆಯವ್ಯಯ ಘೋಷಣೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯ ಇತರ ಮುಖ್ಯಾಂಶಗಳು:1. ಇಲಾಖೆಯ 50 ಕನಕದಾಸ ವಿದ್ಯಾರ್ಥಿನಿಲಯಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಾಣಗಳ ಕಾರ್ಯವನ್ನು ಪ್ರಾರಂಭಿಸುವುದು
2. ಈ ವರ್ಷ ಜುಲೈ ಒಳಗೆ ಫಲಾನುಭವಿಗಳ ಆಯ್ಕೆ ಮುಗಿಯಬೇಕು
3. ವಿದ್ಯಾರ್ಥಿನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಒದಗಿಸಲು ಮಾಸಿಕ ಭೋಜನಾ ವೆಚ್ಚವನ್ನು ಹೆಚ್ಚಿಸಲಾಗಿದೆ.
4. ನಾರಾಯಣ ಗುರು ವಸತಿ ಶಾಲೆ ಸ್ಥಾಪನೆಗೆ ಸ್ಥಳ ನಿಗದಿಯಾಗಿದೆ. ಮೊದಲ ಹಂತದಲ್ಲಿ 5 ಕೋಟಿ ರೂ.ಗಳಿಗೆ ಶಾಲೆಯನ್ನು ಪ್ರಾರಂಭ ಮಾಡುವುದು.
5. ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ಅನುದಾನ ಲಭ್ಯವಿದ್ದು, ಇದನ್ನು 100 ಕೋಟಿ ನೀಡುವುದು, ವೀರಶೈವ ಅಭಿವೃದ್ಧಿ ನಿಗಮಕ್ಕೆ ಲಭ್ಯವಿರುವ 100 ಕೋಟಿ ರೂ.ಗಳು ವೆಚ್ಚವಾದ ನಂತರ ಹೆಚ್ಚುವರಿ 100 ಕೋಟಿ ಗಳನ್ನು ಒದಗಿಸುವುದು. ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ತುರ್ತಾಗಿ ಸಭೆ ಕರೆಯುವಂತೆ ಸೂಚಿಸಿದರು.
6. ದೇವರಾಜ ಅರಸ್ ಹಿಂದುಳಿದ ವರ್ಗಗಳ ಹಿಂದುಳಿದ ನಿಗಮದ ಮೂಲಕ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಶೇ 85 ರಷ್ಟು ಪ್ರವರ್ಗ 1 ಮತ್ತು 2 ಎ ಗೆ ವರ್ಗೀಕರಿಸಿ ಬರುವ ಸಮುದಾಯಗಳ ಪಟ್ಟಿಯನ್ನು ಕಡತದಲ್ಲಿ ಸಲ್ಲಿಸುವಂತೆ ತಿಳಿಸಿದರು.
7. ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ನೀಡುವುದು
8. ಅಮೃತ ಮುನ್ನಡೆ ನೂತನ ಯೋಜನೆಗೆ ಮುಂದಿನ ವಾರದಿಂದ ಅರ್ಜಿ ಕರೆಯುವುದು . ಪದವಿ ಕೋರ್ಸುಗಳ ವಿದ್ಯಾರ್ಥಿಗಳಿಗೆ ಸೀಮಿತಗೊಳಿಸುವುದು.
9. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಇಲಾಖೆಗಳಿಂದ 50,000 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕುರಿತು ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ, ಉನ್ನತ ಶಿಕ್ಷಣ ಇಲಾಖೆಗಳ ಸಭೆ ಕರೆದು, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಸಂಖ್ಯೆಯನ್ನು ನಿಗದಿಪಡಿಸುವಂತೆ ಸೂಚಿಸಿದರು.
2500 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ

ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ಸೂಕ್ತ ಕ್ರಮ ವಹಿಸಲು ಸಿಎಂ ಸೂಚನೆ

ಪ್ರತಿ ಟ್ವೀಟ್​ಗೆ 10 ಲಕ್ಷ ರೂ.: ಬಾಲಿವುಡ್​ನ ಈ ಸಿನಿ ವಿಮರ್ಶಕನ ಹಿಂದೆ ಬಿದ್ದಿವೆ ಸೌತ್​ ಸಿನಿತಂಡ, ಗಲ್ಲಾಪೆಟ್ಟಿಗೆ ಗೋಲ್ಮಾಲ್!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 3 =
Remember me
