ಬೆಂಗಳೂರು:ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ಸಮ್ಮತಿ ನೀಡುವಾಗ ಯಾವ ಸೆಕ್ಷನ್‌ಗಳಡಿ ಅಪರಾಧವಿದೆ ಎಂದು ತಿಳಿಸಿಲ್ಲ. ಗಣರಾಜ್ಯ ಪದ್ಧತಿಯಲ್ಲಿನ ನಿಯಮಗಳನ್ನು ಪಾಲನೆ ಮಾಡಿಲ್ಲ. ಸಮ್ಮತಿ ನೀಡಿದ ಕ್ರಮವೇ ಕಾನೂನುಬಾಹಿರವಾಗಿದೆ. ತನಿಖೆಗೆ ನೀಡಿದ್ದ ಸಮ್ಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ.
ಆದ್ದರಿಂದ ಅರ್ಜಿ ವಜಾಗೊಳಿಸಬೇಕು ಎಂದು ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಕಪಿಲ್ ಸಿಬಲ್ ನ್ಯಾಯಪೀಠಕ್ಕೆ ಕೋರಿದರು. ಆದಾಯ ಮೀರಿ ಆಸ್ತಿ ಗಳಿಗೆ ಆರೋಪದಲ್ಲಿ ಡಿಕೆಶಿ ವಿರುದ್ಧ ಸಿಬಿಐ ತನಿಖೆ ನಡೆಸಲು ನೀಡಿದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಈ ಹಿಂದೆ ಸರ್ಕಾರ ನೀಡಿರುವ ಸಮ್ಮತಿ ರಾಜಕೀಯ ಪ್ರೇರಿತವಾಗಿದೆ. ಅಂದಿನ ಮುಖ್ಯಮಂತ್ರಿಗಳ ಮೌಖಿಕ ಹೇಳಿಕೆ ಆಧರಿಸಿ ಅಧಿಕಾರಿಗಳು ಅನುಮತಿ ನೀಡಿದ್ದಾರೆ. ಆರೋಪ ಸಂಬಂಧ ತನಿಖಾಧಿಕಾರಿಗಳು ನಿರ್ಧರಿಸಬೇಕು. ಮುಖ್ಯಮಂತ್ರಿ, ಪ್ರಧಾನ ಮಂತ್ರಿ ತಿಳಿಸಿದ್ದಾರೆ ಎಂಬ ಕಾರಣದಿಂದ ಎಫ್‌ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ವಿವರಿಸಿದರು.
ಡಿಕೆಶಿ ಪರ ಮತ್ತೊಬ್ಬ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿ, ಸಿಬಿಐ ತನಿಖೆಗೆ ಸರ್ಕಾರ ಸಮ್ಮತಿ ನೀಡುವುದು ಅತ್ಯಗತ್ಯ. ಅಪರೂಪದ ಸಂದರ್ಭಗಳಲ್ಲಿ ಮಾತ್ರ ಹೈಕೋರ್ಟ್ ನಿರ್ದೇಶನ ನೀಡಬಹುದಾಗಿದೆ. ಕೇಂದ್ರ ಅನುಮತಿ ನೀಡಿದರೂ ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೇ ತನಿಖೆ ನಡೆಸುವುದಕ್ಕೆ ಅವಕಾಶವೇ ಇಲ್ಲ ಎಂದು ವಿವರಿಸಿದರು.
ಸಿಬಿಐ ಪರ ವಾದ ಮಂಡಿಸಲು ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನ್ಯಾಯಪೀಠ ಮೇ 31ಕ್ಕೆ ಮುಂದೂಡಿತು.ಅರ್ಜಿ ವಿಚಾರಣೆ ವೇಳೆ ಡಿಕೆಶಿ ಪುತ್ರ ಆಕಾಶ್ ಹಾಜರಿದ್ದು, ವಾದಮಂಡನೆ ಆಲಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − ten =
Remember me
