ದಾವಣಗೆರೆ:ಹಿರಿಯ ಕಾಂಗ್ರೆಸ್​ ನಾಯಕ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ದಾವಣಗೆರೆ ಎಸ್ಸ್​ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಿ ಬಳಿಕ ಬೆಂಗಳೂರಿಗೆ ರವಾನಿಸಲಾಗಿದೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ವೈದ್ಯರು ಶಾಮನೂರು ಅವರಿಗೆ ಫೇಸ್ ಮೇಕರ್ ಅಳವಡಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಹೊಸ ಪಿಚ್​, ಹೊಸ ವಾತಾವರಣ; ಅಮೆರಿಕ ಸ್ಟೇಡಿಯಂ ಬಗ್ಗೆ ಮೊದಲ ಅಭಿಪ್ರಾಯ ತಿಳಿಸಿದ ಹಿಟ್​ಮ್ಯಾನ್​
ಕಾಂಗ್ರೆಸ್‌ ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿದ್ದು, ಕಫದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಶುಕ್ರವಾರ ಬೆಳಗ್ಗೆ ತೀವ್ರ ಅಸ್ವಸ್ಥರಾದರು. ಹೆಚ್ಚುವರಿ ಚಿಕಿತ್ಸೆಗೆಂದು ನಗರದ ಎಸ್‌ಎಸ್‌ ಹೈಟೆಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ವೈದ್ಯರು ಹೆಚ್ಚಿನ ನಿಗಾ ವಹಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ.
ಇತ್ತ ನೆಚ್ಚಿನ ನಾಯಕ ಆಸ್ಪತ್ರೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
