ಬೆಂಗಳೂರು:ಹಿರಿಯ ಪತ್ರಕರ್ತ, ಲೇಖಕ, ಅನುವಾದಕ ಜಿ.ಎನ್. ರಂಗನಾಥ ರಾವ್ ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಮೃತರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ತೀವ್ರ ಅನಾರೊಗ್ಯದಿಂದ ಬಳಲುತ್ತಿದ್ದ ಅವರು ಬಸವನಗುಡಿಯ ಬಿಎಂಎಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
1942ರಲ್ಲಿ ಹಾರೋಹಳ್ಳಿಯಲ್ಲಿ ಜನಿಸಿದ ಅವರು, ಹೊಸಕೋಟೆ ಹಾಗೂ ಬೆಂಗಳೂರು ನಗರಗಳಲ್ಲಿ ವಿದ್ಯಾಭ್ಯಾಸ ಮಾಡಿದರು. 1962ರಲ್ಲಿ ಸಂಯುಕ್ತ ಕರ್ನಾಟಕ ಬೆಂಗಳೂರು ಆವೃತ್ತಿಯಲ್ಲಿ ಉಪಸಂಪಾದಕರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ ಜಿ.ಎನ್. ರಂಗನಾಥ ರಾವ್ ಪ್ರಜಾವಾಣಿ ಸೇರಿದಂತೆ ಅನೇಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಕಾರ್ಯನಿರ್ವಾಹಕ ಸಂಪಾದಕ ಹುದ್ದೆಗೇರಿ ನಿವೃತ್ತರಾದರು.
ಹಿರಿಯ ಪತ್ರಕರ್ತ ಜಿ.ಎನ್. ರಂಗನಾಥ ರಾವ್​ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯೆಕ್ರಿಯೆಯನ್ನು ಕುಟುಂಬಸ್ಥರು ಚಾಮರಾಜಪೇಟೆ ರುದ್ರಭೂಮಿಯಲ್ಲಿ ನೆರವೇರಿಸಿದ್ದಾರೆ.
ಇದನ್ನೂ ಓದಿ:VIDEO| ನನ್ನನ್ನು ಕೊಲ್ಲಬೇಡಿ ಎಂದು ಅಂಗಲಾಚಿದರು ಮಹಿಳೆಯನ್ನು ಬಿಡದ ಹಮಾಸ್ ಉಗ್ರರು
ಹಿರಿಯ ಲೇಖಕ, ಪತ್ರಕರ್ತ ಜಿ.ಎನ್. ರಂಗನಾಥ ರಾವ್ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ. ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಾಡು ನುಡಿಯ ಉನ್ನತಿಗಾಗಿ ದುಡಿದಿದ್ದರು. ರಂಗನಾಥ ರಾವ್ ಅವರ ಅಗಲಿಕೆ ನಾಡಿನ ಪತ್ರಿಕಾರಂಗ ಮತ್ತು…pic.twitter.com/8v9EL8MqMP
ನಾಡಿನ ಖ್ಯಾತ ಪತ್ರಕರ್ತ, ಹಿರಿಯ ಲೇಖಕ ಜಿ.ಎನ್.ರಂಗನಾಥ ರಾವ್ ಅವರ ನಿಧನದ ಸುದ್ದಿ ತೀವ್ರ ದುಃಖಕರ. ಪತ್ರಕರ್ತರಾಗಿ ಸೇವೆ ಸಲ್ಲಿಸುವ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ಅವರ ಕೊಡುಗೆ ಸಾಕಷ್ಟಿದೆ. ಖಾದ್ರಿ ಶಾಮಣ್ಣ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ…pic.twitter.com/LJX6Hjchmm
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − four =
Remember me
