ಬೆಂಗಳೂರು:ಹಿರಿಯ ಪತ್ರಕರ್ತ ಗೌರೀಪುರ ಚಂದ್ರು (54) ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದು, ಅವರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕಳೆದ 1 ವಾರದಿಂದ ರಜೆಯಲ್ಲಿದ್ದರು. ಈ ನಡುವೆ ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇದೇ ವೇಳೆ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೌರೀಪುರದವರಾದ ಚಂದ್ರು, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಆರೋಗ್ಯ ಇಲಾಖೆ ಗುರುವಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಚಂದ್ರು ಅವರ ಸಾವಿನ ಮಾಹಿತಿ ದಾಖಲಿಸಿಲ್ಲ.
ಬಿಬಿಎಂಪಿ ಮೂಲಗಳ ಪ್ರಕಾರ ಅವರು ಕರೊನಾ ಸೋಂಕಿತರು ಎಂಬುದನ್ನು ಖಚಿತಪಡಿಸಿದ್ದಾರೆ. ನಗರದ ವಿದ್ಯಾಪೀಠ ವೃತ್ತ ಬಳಿ ವಾಸವಿದ್ದ ಮೃತರ ನೆರೆಯವರಿಗೆ ಸೋಂಕು ಪತ್ತೆಯಾಗಿತ್ತು. ಅವರಿಂದಲೇ ಇವರಿಗೆ ಸೋಂಕು ಹರಡಿರಬಹುದು ಎಂದು ಶಂಕಿಸಲಾಗಿದೆ.
ಗಾಂಧಿ ಜಯಂತಿ ಸೇರಿ ಎಲ್ಲ ಜಯಂತಿಗಳ ರಜೆ ರದ್ದು ಮಾಡಲು ದೊರೆಸ್ವಾಮಿ ಶಿಫಾರಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
