ಬೆಂಗಳೂರು:ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ಅವರು ಇಂದು ನಿಧನರಾದರು. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್​ ಟ್ಯೂಮರ್ ಆಪರೇಶನ್​ಗೆ ಒಳಗಾಗಿದ್ದ ಅವರು ಬಳಿಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚೇತರಿಸಿಕೊಳ್ಳುವ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಪತ್ರಕರ್ತರ ಸಹಕಾರ ಸಂಘ ಮತ್ತು ಪ್ರೆಸ್​ಕ್ಲಬ್​​ನಲ್ಲಿ ಸಕ್ರೀಯವಾಗಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಪತ್ರಕರ್ತರ ಆಪತ್ಭಾಂಧವ ನಿಧಿಯಿಂದ ಆರ್ಥಿಕ ನೆರವು ನೀಡುವ ಮೂಲಕ ಅವರು ಗುಣಮುಖರಾಗಲೆಂದು ಪತ್ರಕರ್ತರು ಹಾರೈಸಿದ್ದರು.
ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ. ಸಂಘಟನಾತ್ಮಕ ಚಟುವಟಿಕೆಗಳ ಮೂಲಕ ಸದಾ ಕ್ರಿಯಾಶೀಲವಾಗಿ ಇರುತ್ತಿದ್ದ ಮುಳ್ಳಳ್ಳಿ ಸೂರಿ ಅವರ ನಿಧನದಿಂದ ಸುದ್ದಿ ಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ.
ಹೃದಯದ ಕಾಳಜಿ ಇರಲಿ: ರಕ್ತ ಪರಿಚಲನೆ ಸುಧಾರಿಸಲು ನಿಮ್ಮ ಡಯಟ್​ನಲ್ಲಿ ಈ ಆಹಾರಗಳನ್ನು ಸೇರಿಸಿ

ಲಿಂಗ ಪರಿವರ್ತನೆಗೆ ಒಳಗಾಗುತ್ತಿದ್ದಾರೆ ಈ ಮಾಜಿ ಸಿಎಂ ಮಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nine =
Remember me
