ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಗೋಪಾಲ್ ಚೆಟ್ಟಿಯಾರ್ (78) ಮಂಗಳವಾರ ಬೆಳಗ್ಗೆ 2.45ಕ್ಕೆ ವಿಧಿವಶರಾಗಿದ್ದಾರೆ.
ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖರಾಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖರಾಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಗೋಪಾಲ್ ಚೆಟ್ಟಿಯಾರ್ 1946 ಅಗಸ್ಟ್ 8ರಂದು ಕೇರಳದ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಸಂಘದ ಸ್ವಯಂಸೇವಕರಾಗಿ ತೊಡಗಿಸಿಕೊಂಡಿದ್ದರು. ಶಿಸ್ತುಬದ್ಧ ಜೀವನಶೈಲಿ, ಸೇವಾಭಾವ ಜಾಗರಣ, ಸಾಮಾಜಿಕ ಸಮರಸತೆಯ ಮೂಲಕ ಕಾರ್ಯಕರ್ತರಿಗೆ ಮಾದರಿಯಾಗಿದ್ದರು.
ಆರ್‌ಎಸ್‌ಎಸ್ ಸಂತಾಪ:ಗೋಪಾಲ್ ಚೆಟ್ಟಿಯಾರ್ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ, ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ಭಾರತೀಯ ಶಿಕ್ಷಣ ಮಂಡಲದ ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಶಂಕರಾನಂದ, ಪ್ರಜ್ಞಾ ಪ್ರವಾಹದ ಅಖಿಲ ಭಾರತೀಯ ಸಂಯೋಜಕ ನಂದಕುಮಾರ್, ಡಾ. ರಾಮ್ ಮಾಧವ್ ಸಂತಾಪ ಸೂಚಿಸಿದ್ದಾರೆ.
ಗೋಪಾಲ ಚೆಟ್ಟಿಯಾರರ ನಿಧನದ ಸುದ್ದಿ ಅತೀವ ದುಃಖಕರವಾಗಿದ್ದು, ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಭಗವಂತ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಹಾಗೂ ಚಿಟ್ಟಿಯಾರ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ದತ್ತಾತ್ರೇಯ ಹೊಸಬಾಳೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
