ಬೆಂಗಳೂರು:ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಜಾರಿಗೆ ಸುಗ್ರೀವಾಜ್ಞೆ ರದ್ದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ 30ಕ್ಕೂ ಹೆಚ್ಚು ಸಂಘಟನೆಗಳು ರಾಜ್ಯರಾಜಧಾನಿಯಲ್ಲಿ ಬೀದಿಗಳಿದು ಪ್ರತಿಭಟನೆ ನಡೆಸುತ್ತಿವೆ. ಇದರ ಮುಂದುವರಿದ ಭಾಗವಾಗಿ ಸೆ.25ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಇದರ ಬೆನ್ನಲ್ಲೇ ಕೆಲ ಮುಖಂಡರು ಬಂದ್​ಗೆ ಅಪಸ್ವರ ಎತ್ತಿದ್ದು, ಬಂದ್​ ಬೇಕಾ? ಬೇಡ್ವಾ? ಎಂಬ ಪ್ರಶ್ನೆ ಎದ್ದಿದೆ.
ಈ ಕುರಿತು ಮಂಗಳವಾರ ಸಂಜೆ 4ಕ್ಕೆ ಕುರುಬೂರು ಶಾಂತಕುಮಾರ್​ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸುದ್ದಿಗೋಷ್ಠಿ ನಡೆಸಿದರು. ಸುಗ್ರೀವಾಜ್ಞೆ ಮೂಲಕ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗೆ ದೇಶದ ಜನತೆ ಅಂಗೀಕಾರ ನೀಡಿಲ್ಲ. ಹಾಗಾಗಿ ಸೆ.25ರಂದು ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ಈ ಬಂದ್​ಗೆ ನಮ್ಮ ತಾತ್ವಿಕ ಒಪ್ಪಿಗೆ ಇದೆ. ಆದರೆ, ಐಕ್ಯ ಹೋರಾಟದ ಬೆಂಬಲದ ಬಗ್ಗೆ ಬುಧವಾರ ಬೆಳಗ್ಗೆ ಘೋಷಣೆ ಮಾಡುತ್ತೇವೆ ಎಂದು ರೈತ ಮುಖಂಡರು ಹೇಳಿದರು. ಈಗಾಗಲೇ 7-8 ಸಂಘಟನೆಗಳು ಬಂದ್​ಗೆ ಒಪ್ಪಿಗೆ ನೀಡಿವೆ. ಆನ್​ಲೈನ್​ ಮೂಲಕ ಮಂಗಳವಾರ ಸಂಜೆ ಇನ್ನುಳಿದ ಸಂಘಟನೆಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.ಇದನ್ನೂ ಓದಿರಿರೈತರ ವ್ಯಾಪಾರ ಸುಲಭ ಮಾಡುವ ತಿದ್ದುಪಡಿ ಮಸೂದೆ: ರಾಜ್ಯಸಭೆಯಲ್ಲಿ ಸಿಕ್ಕಿತು ಅಂಗೀಕಾರ
ಈ ನಡುವೆ ಸಂಘಟನೆಗಳಲ್ಲೇ ಬಂದ್​ ಕುರಿತಾಗಿ ಭಿನ್ನಾಭಿಪ್ರಾಯ ಮೂಡಿದೆ. ಕರೊನಾದಂತಹ ಸಂಕಷ್ಟದ ನಡುವೆ ಕರ್ನಾಟಕ ಬಂದ್​ ಬೇಕಾ? ಎಂದು ಕೆಲ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಎಷ್ಟೋ ಜನ ಕೂಲಿ-ನಾಲಿ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಲಾಕ್​ಡೌನ್​ ಟೈಂನಲ್ಲಿ ಸಾಕಷ್ಟು ನಷ್ಟ ಸಂಭವಿಸಿದೆ. ಹೀಗಾಗಿ ನಮ್ಮ ಹೋರಾಟವನ್ನು ನಾವು ಮಾಡೋಣ, ಆದ್ರೆ ಬಂದ್​ ಬೇಡ ಎಂಬ ಅಭಿಪ್ರಾಯ ಕೆಲವರಿಂದ ಕೇಳಿಬಂದಿದೆ. ಒಟ್ಟಾರೆ ಕರ್ನಾಟಕ ಬಂದ್​ ಆಗುತ್ತೋ, ಇಲ್ಲವೋ ಎಂಬುದು ಬುಧವಾರ ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ಸಿಗಲಿದೆ.
ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ಕುರುಬೂರು ಶಾಂತಕುಮಾರ್​ ನೇತೃತ್ವದಲ್ಲಿ ಸೋಮವಾರ ಆರಂಭವಾದ ಧರಣಿಯಲ್ಲಿ ಸಹಸ್ರಾರು ಸಂಖ್ಯೆಯ ರೈತರು ಪಾಲ್ಗೊಂಡಿದ್ದಾರೆ. ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿರುವ ಭೂ ಸುಧಾರಣೆ, ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲೇಬೇಕೆಂದು ಮಳೆಯಲ್ಲೂ ಪ್ರತಿಭಟನೆ ನಡೆಸುತ್ತಿದ್ದಾರೆ.
ಸದನದಲ್ಲಿ ತನ್ನದೇ ಸರ್ಕಾರದ ವಿರುದ್ಧ ಧರಣಿಗೆ ಕುಳಿತ ಬಿಜೆಪಿ ಎಂಎಲ್ಸಿ!

ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು… ಮಳೆಯಲ್ಲೇ ಬೃಹತ್​ ಪ್ರತಿಭಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 14 =
Remember me
