ಬೆಂಗಳೂರು:ತಮಿಳುನಾಡಿಗ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆಪ್ಟೆಂಬರ್​ 26ರಂದು (ಮಂಗಳವಾರ) ಬೆಂಗಳೂರು ಬಂದ್​ಗೆ ಕರೆ ನೀಡಿವೆ. 150ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್​ಗೆ ಬೆಂಬಲ ಸೂಚಿಸಿವೆ.
ಕಾವೇರಿ ನೀರನ್ನು ನಂಬಿಕೊಂಡಿರುವ ಜಿಲ್ಲೆಗಳಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ಶನಿವಾರ ಮಂಡ್ಯ ಬಂದ್ ಬಹುತೇಕ ಯಶಸ್ವಿಯಾಗಿದ್ದು, ಸೆಪ್ಟೆಂಬರ್​ 26ರಂದು ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಬೆಂಗಳೂರು ಬಂದ್ ದಿನ ಟೌನ್ ಹಾಲ್​​ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
ರಾಜ್ಯದ ಆಡಳಿತ ಶಕ್ತಿ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ಪ್ರತಿಭಟನೆ, ಬಂದ್ ನಡೆಸಿದರೆ ರಾಜ್ಯ ಸರ್ಕಾರದ ಗಮನವನ್ನು ಹೆಚ್ಚಿನ ಮಟ್ಟಿಗೆ ಸೆಳೆದು ಕೇಂದ್ರದ ಮೇಲೆ ಮತ್ತು ಕಾನೂನಾತ್ಮಕವಾಗಿ ಕಾವೇರಿ ನೀರಿಗಾಗಿ ಮುಂದಿನ ದಿನಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹೋರಾಟ ನಡೆಸಲು ಉತ್ತಮ ಎಂದು ವಿವಿಧ ಸಂಘಟನೆಗಳು ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + nineteen =
Remember me
