ಹಾಸನ: ಅರಸೀಕೆರೆ ತಾಲೂಕು ಸೂಳೆಕೆರೆ ಬಳಿ ಸಾರಿಗೆ ಬಸ್, ಟಾಟಾ ಮ್ಯಾಜಿಕ್, ಗೂಡ್ಸ್ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟು, 11 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಸವರಾಜು (48), ಯಲ್ಲಯ್ಯ (50) ಹಾಗೂ ರಮೇಶ್(24 ) ಮೃತರು. ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಸಾರಿಗೆ ಬಸ್ ಸೇರಿ ಮೂರು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ.
ಗಾಯಾಳು ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ‌ ಇದೆ. ಅರಸೀಕೆರೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + twenty =
Remember me
