ಬೆಂಗಳೂರು:ಬಡವರಿಗೆ ಕಡಿಮೆ ಖರ್ಚಿನಲ್ಲಿ ಆಹಾರ ಪೂರೈಸುವ ಉದ್ದೇಶದಿಂದ ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಅಲ್ಲದೆ ಊಟದ ಮೆನು ಕೂಡ ಬದಲಾವಣೆ ಮಾಡಲಾಗಿದೆ. ಸ್ಥಳೀಯ ಆಹಾರ ಪದ್ಧತಿಗೆ ಅನುಗುಣವಾಗಿ ಆಹಾರ ಪೂರೈಸುವ ಹಾಗೂ ಹೆಚ್ಚು ಆಹಾರ ಪದಾರ್ಥಗಳನ್ನು ನೀಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಇಂದಿರಾ ಕ್ಯಾಂಟೀನ್ ಬಲಪಡಿಸುವುದಾಗಿ ಮುಖ್ಯಮಂತ್ರಿಯಾದಿಯಾಗಿ ಹಲವು ಸಚಿವರು ಹೇಳಿದ್ದರು. ಈಗ ಆ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದು, 188ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಹಾಲಿ ಇರುವ 197 ಕ್ಯಾಂಟೀನ್‌ಗಳ ದುರಸ್ತಿಗಾಗಿ 21.29 ಕೋಟಿ ರೂ. ಬಿಡುಗಡೆ ಮಾಡಲು ನಿರ್ಣಯಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದರದಲ್ಲಿ ಯಾವುದೇ ಬದಲಾವಣೆ ಇಲ್ಲಈ ಕ್ಯಾಂಟೀನ್‌ಗಳಲ್ಲಿ ಇನ್ನು ಮುಂದೆ ಸ್ಥಳೀಯ ಆಹಾರ ಪದ್ಧತಿ ಆಧರಿಸಿ ಊಟ ನೀಡುವುದು ಹಾಗೂ ಹೆಚ್ಚು ಪದಾರ್ಥಗಳನ್ನು ನೀಡಿದರೂ ಕೂಡ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಒಂದು ಊಟಕ್ಕೆ 10 ರೂ. ಇರುತ್ತದೆ.ಒಂದು ದಿನ ಉಪಹಾರ ಹಾಗೂ ಎರಡು ಊಟ ಸೇರಿ ಗ್ರಾಹಕರಿಂದ 25 ರೂ. ಪಡೆದರೆ 37 ರೂ.ಗಳನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
