ಬೆಂಗಳೂರು:ಕರೊನಾದಂತಹ ಸಂಕಷ್ಟ ಕಾಲದಲ್ಲೂ ಮಕ್ಕಳ ಕಲಿಕೆಯನ್ನು ನಿರಂತರವಾಗಿಸುವ ನಿಟ್ಟಿನಲ್ಲಿ 8ರಿಂದ 10ನೇ ತರಗತಿ ವರೆಗಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜು.20ರಿಂದ ಆ. 8ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಸೇತುಬಂಧ ಕಾರ್ಯಕ್ರಮ ಪ್ರಸಾರ ಮಾಡಲಾಗುತ್ತಿದೆ.
ಈ ಕುರಿತು ಸೋಮವಾರ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ಕುಮಾರ್​, ಮಕ್ಕಳು ಮನೆಯಲ್ಲಿ ಇದ್ದುಕೊಂಡೇ ಕಲಿಕೆಯಲ್ಲಿ ಭಾಗವಹಿಸಲು ಸಹಾಯವಾಗುವಂತೆ ಪ್ರೇರೇಪಿಸುವ ಉದ್ದೇಶದಿಂದ ತರಗತಿಗಳನ್ನು ನಡೆಸಲಾಗುತ್ತಿದೆ. ಯಾವ ಸಮಯಕ್ಕೆ ತರಗತಿಗಳು ಪ್ರಸಾರ ಆಗಲಿವೆ ಎಂಬ ವೇಳಾಪಟ್ಟಿಯನ್ನು ಸದ್ಯದಲ್ಲೇ ತಿಳಿಸಲಾಗುತ್ತದೆ. ಸೇತುಬಂಧ ಕಾರ್ಯಕ್ರಮದ ವಿಡಿಯೋಗಳನ್ನು ಯೂ ಟ್ಯೂಬ್​ನಲ್ಲೂ ಅಪ್​ಲೋಡ್​ ಮಾಡಲಾಗುತ್ತದೆ ಎಂದು ತಿಳಿಸಿದರು.ಇದನ್ನೂ ಓದಿರಿಪ್ರಥಮ ಪಿಯುಸಿ ಪರೀಕ್ಷೆ ರದ್ದು, ಎಲ್ಲ ವಿದ್ಯಾರ್ಥಿಗಳು ಪಾಸ್!
ಸೇತುಬಂಧ ಕಾರ್ಯಕ್ರಮದ ಅಡಿ ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್​, ಸಂಸ್ಕೃತ, ಉರ್ದು, ದ್ವಿತೀಯ ಭಾಷೆ ಇಂಗ್ಲಿಷ್​, ತೃತೀಯ ಭಾಷೆ ಹಿಂದಿ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯವನ್ನು ಬಿತ್ತರಿಸಲಾಗುತ್ತದೆ. ಸದ್ಯ ಪ್ರೌಢಶಾಲಾ ವಿದ್ಯಾಥಿರ್ಗಳಿಗೆ ಕನ್ನಡ ಮಾಧ್ಯಮದಲ್ಲಿ ಮಾತ್ರ ತರಗತಿ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 1ರಿಂದ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲಿಷ್​ ಎರಡೂ ಮಾಧ್ಯಮದಲ್ಲಿ ವಿಡಿಯೋ ಪಾಠಗಳನ್ನು ಶಿಕ್ಷಣ ಇಲಾಖೆ ಸಹಯೋಗದಲ್ಲಿ ದೂರದರ್ಶನ ಚಂದನ ವಾಹಿನಿಯು ಪ್ರಸಾರ ಮಾಡಲಿದೆ ಎಂದು ಸುರೇಶ್​ ಕುಮಾರ್​ ಹೇಳಿದರು.
ಈ ತರಗತಿಗಳ ಕಲಿಕೆಯನ್ನು ಮೌಲ್ಯಮಾಪನ ಮಾಡುವುದಕ್ಕಾಗಿ ಪ್ರತಿ 20 ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಒಬ್ಬ ಶಿಕ್ಷಕರನ್ನು ನೇಮಿಸಲಾಗುತ್ತದೆ. ಈ ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆಯನ್ನು ಯಾವ ರೀತಿಯಲ್ಲಿ ಮೌಲ್ಯಮಾಪನ ಮಾಡಬೇಕು ಎಂಬುದನ್ನು ತಿಳಿಯುವುದಕ್ಕಾಗಿ ಇಲಾಖೆ ವತಿಯಿಂದ ರೂಪುರೇಷೆ ಪ್ರಕಟಿಸಲಾಗುವುದು ಎಂದರು.
ಸಮಾಧಿಯಲ್ಲಿ ಕೊಳೆಯುತ್ತಿದ್ದ ಕರ್ನಾಟಕ ಮೂಲದ ಮಗು ಶವ ತೆಗೆಸಿ ಬೇರೆಡೆಗೆ ದೂಡಿದ್ರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
