ಬೆಂಗಳೂರು:ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ಹೊಂದಿದ್ದ ವ್ಯಕ್ತಿಯೋರ್ವನ ಬ್ಯಾಗ್​​​ ಎಗರಿಸಿದ್ದ ಖದೀಮರ ತಂಡವನ್ನು ಉಪ್ಪಾರಪೇಟೆ ಪೊಲೀಸರು ಎಡೆಮುರಿ ಕಟ್ಟಲು ಯಶಸ್ವಿಯಾಗಿದ್ದಾರೆ.
ಜು.17 ರಂದು ರಾತ್ರಿ ಮೆಜೆಸ್ಟಿಕ್​​​ನಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ‌ ಈ ಕಳ್ಳತನ ನಡೆದಿತ್ತು. ದುಬೈನಿಂದ ಬಂದಿದ್ದ ವ್ಯಕ್ತಿಯೋರ್ವನ ಬ್ಯಾಗ್​​ಅನ್ನು ಅಲ್ಲೇ ಇದ್ದ ಕಳ್ಳರ ತಂಡ ಕ್ಷಣಾರ್ಧದಲ್ಲಿ ಎಗರಿಸಿ ಪರಾರಿಯಾಗಿತ್ತು.
ಇದನ್ನೂ ಓದಿ:ಚಾಲಕನ ನಿರ್ಲಕ್ಷ್ಯತನ… ತಮ್ಮದಲ್ಲದ ತಪ್ಪಿಗೆ ಪ್ರಾಣ ಬಿಟ್ಟ ಪ್ರಯಾಣಿಕರು
ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳಿಗಾಗಿ ಬಲೆ ಬೀಸಿದ ಪೊಲೀಸರು ರಾಜು ನಾಯ್ಡು,‌ ರವಿ, ದಾಮೋದರನ್, ರಂಗನ್ ಸೇರಿ 7 ಜನರನ್ನು ಬಂಧಿಸಿದ್ದಾರೆ.ಬಂಧಿತರಿಂದ ಒಂದು ಪಾಸ್‌ಪೋರ್ಟ್, ಕ್ರೆಡಿಟ್ ಕಾರ್ಡ್ಸ್, ನಗದು, ಚಿನ್ನಾಭರಣ ಸೇರಿದಂತೆ ಒಟ್ಟು 3.90 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಇವರ ಬಂಧನದಿಂದ ಮೊಬೈಲ್ ರಾಬರಿ ಮತ್ತು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.
#BBK8: ಖುಲಾಯಿಸಿದ ಲಕ್, ಫಿನಾಲೆಗೂ ಮೊದಲೇ ಹಣ ಗೆದ್ದ ಅರವಿಂದ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
