ಮಂಡ್ಯ:ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಬಳಸಿಕೊಂಡು ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ಜಿಪಂ ಸದಸ್ಯ ಎಚ್.ಎನ್.ಯೋಗೇಶ್ ಸಲಹೆ ನೀಡಿದರು.ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆಯೋಜಿಸಿದ್ದ 30 ದಿನದ ಕೌಶಲಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಶುಕ್ರವಾರ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದರು. ಹೊಲಿಗೆ ಯಂತ್ರ ಪಡೆದ ಮಹಿಳೆಯರು ಸದ್ಭಳಕೆ ಮಾಡಿಕೊಂಡು ತಮ್ಮ ಜೀವನ ರೂಪಿಸಿಕೊಳ್ಳಬೇಕು. ಈ ಮೂಲಕ ಆರ್ಥಿಕವಾಗಿ ಸದೃಢ ಬದುಕು ಕಟ್ಟಿಕೊಳ್ಳುವಂತೆ ಕಿವಿಮಾತು ಹೇಳಿದರು.ಮುಖಂಡರಾದ ಪುಟ್ಟಸ್ವಾಮಿ, ರಮೇಶ್, ಬಾಲು ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + nineteen =
Remember me
