ಶಿವಮೊಗ್ಗ:ಚಾಕಲೇಟ್ ಕೊಡುವುದಾಗಿ ಮನೆಗೆ ಕರೆದೊಯ್ದು ಆರು ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ (ತ್ವರಿತ ವಿಶೇಷ ನ್ಯಾಯಾಲಯ)-2 (ಪೋಕ್ಸೊ)ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ.
ಭದ್ರಾವತಿ ತಾಲೂಕಿನ ಲಿಂಗರಾಜ್ ಅಲಿಯಾಸ್ ನವೀನ್ (18) ಶಿಕ್ಷೆಗೆ ಒಳಗಾದವ. ಈತ 2019ರ ಫೆ.10ರಂದು ಮನೆ ಮುಂದೆ ಆಟವಾಡುತ್ತಿದ್ದ ಅಪ್ರಾಪ್ತೆಗೆ ಚಾಕಲೇಟ್ ಕೊಡುತ್ತೇನೆಂದು ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಯಾಗಿದ್ದ ಭದ್ರಾವತಿ ಗ್ರಾಮಾಂತರ ಸಿಪಿಐ ಯೋಗೇಶ್ ಪ್ರಕರಣದ ತನಿಖೆ ನಡೆಸಿ ಲಿಂಗರಾಜನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್.ಮೋಹನ್ ಅವರು ಗುರುವಾರ ಲಿಂಗರಾಜ್ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.
ಡೇಟಿಂಗ್ ಆ್ಯಪ್ ಬೆಡಗಿಗಾಗಿ ಕೋಟಿ ಕೊಟ್ಟು ಕೈ ಸುಟ್ಟುಕೊಂಡ ಬ್ಯಾಂಕ್ ಮ್ಯಾನೇಜರ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
