ಬೆಂಗಳೂರು:ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೂರನೇ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಇದನ್ನೂ ಓದಿ:ರೈಲು ದುರಂತಗಳನ್ನು ತಪ್ಪಿಸಲು ‘ಕವಚ್’ ಯೋಜನೆಗೆ 1.112 ಕೋಟಿ ರೂ.: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಈ ಕುರಿತ ಅರ್ಜಿಯನ್ನು ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ವಜಾಗೊಳಿಸಿ ಆದೇಶಿಸಿದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಸೆರೆವಾಸ ಮುಂದುವರೆಯಲಿದೆ.​
ನಿನ್ನೆಯಷ್ಟೇ ಪ್ರಜ್ವಲ್ ಸಹೋದರ ಮತ್ತು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದರ ಖುಷಿಯಲ್ಲಿದ್ದ ಕುಟುಂಬಸ್ಥರು ಇಂದು ಪ್ರಜ್ವಲ್​ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ ನ್ಯಾಯಾಲಯ, ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿರುವುದರಿಂದ ಪ್ರಜ್ವಲ್‌ ರೇವಣ್ಣ ಈಗ ಹೈಕೋರ್ಟ್‌ ಮೊರೆ ಹೋಗುವುದು ಅನಿವಾರ್ಯವಾಗಿದೆ. ಈ ಹಿಂದೆ ಇದೇ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು. ಇವುಗಳಲ್ಲಿ ಒಂದು ರೆಗ್ಯುಲರ್ ಜಾಮೀನು ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳಿದ್ದವು.
ಹಾವೇರಿ: ಫೇಸ್​ಬುಕ್ ಯುವತಿ ನಂಬಿ ಬರೋಬ್ಬರಿ 30 ಲಕ್ಷ ರೂ. ಕಳೆದುಕೊಂಡ ಯೋಗ ಶಿಕ್ಷಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − nine =
Remember me
