ಶಿವಮೊಗ್ಗ:ಅಪ್ರಾಪ್ತೆಯ ಖಾಸಗಿ ಚಿತ್ರಗಳನ್ನು ಮೊಬೈಲ್ ಸ್ಕ್ರೀನ್ ಶಾಟ್ ತೆಗೆದುಕೊಂಡು ಬೆದರಿಸಿ ಲೈಂಗಿಕ ಕಿರುಕು ನೀಡಿದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ -2 ನ್ಯಾಯಾಲಯವು 5 ವರ್ಷ ಕಠಿಣ ಕಾರಾವಾಸ ಶಿಕ್ಷೆ, 2.50 ಲಕ್ಷ ರೂ. ದಂಡ ವಿಧಿಸಿದೆ.
ಇದನ್ನೂ ಓದಿ:ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಐಶ್ವರ್ಯಾ ಹೆಗ್ಡೆ ಸ್ಪರ್ಧೆ? ಡಿಕೆಶಿ ಅಚ್ಚರಿ ಹೇಳಿಕೆ!
ಶಿವಮೊಗ್ಗ ನಗರದ 30 ವರ್ಷದ ಯುವಕ ಶಿಕ್ಷೆಗೆ ಒಳಗಾದವನು. 2021ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತೆಯ ಖಾಸಗಿ ಚಿತ್ರಗಳನ್ನು ಮೊಬೈಲ್ ನಲ್ಲಿ ಸ್ಕ್ರೀನ್ ಶಾಟ್ ತೆಗೆದುಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅಲ್ಲದೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿಯಾಗಿದ್ದ ಮಹಿಳಾ ಠಾಣೆ ಇನ್ ಸ್ಪೆಕ್ಟರ್ ಆರ್.ವೀರೇಶ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್. ಮೋಹನ್ ಆರೋಪ ಸಾಬೀತಾಗಿದ್ದರಿಂದ ಯುವಕನಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲನಾದಲ್ಲಿ ಒಂದು ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು ನೊಂದ ಬಾಲಕಿಗೆ ಪರಿಹಾರವಾಗಿ ದಂಡದ ಮೊತ್ತದಲ್ಲಿ 2.40 ಲಕ್ಷ ರೂ. ನೀಡುವಂತೆ ಆದೇಶಿಸಿದ್ದಾರೆ. ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕ ಎಚ್.ಆರ್.ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 5 =
Remember me
