ಬೆಂಗಳೂರು:ಆ್ಯಪಲ್ ಫೋನ್ (I Phone) ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದು, ಇದಕ್ಕಾಗಿ 30 ಎಕರೆ ಭೂಮಿಯನ್ನು ಕೇಳಿದೆ. ಇದು ಸ್ವಾಗತಾರ್ಹ ಪ್ರಸ್ತಾವನೆಯಾಗಿದ್ದು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್​ (MB Patil) ಹೇಳಿದ್ದಾರೆ.
ಇದನ್ನೂ ಓದಿ:ಕ್ರೈಸ್ತರ ಮೇಲಿನ ದೌರ್ಜನ್ಯ ನಿಲ್ಲಲಿ
ತಮ್ಮನ್ನು ಬುಧವಾರ ಭೇಟಿಯಾಗಿದ್ದ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಫಾರಸ್ ಶಾ ನೇತೃತ್ವದ ನಿಯೋಗದ ಬೇಡಿಕೆಗಳನ್ನು ಕೇಳಿದ ಸಚಿವರು, ಈ ಭರವಸೆಯನ್ನು ನೀಡಿದ್ದಾರೆ. ಎಸ್‌ಎಫ್‌ಎಸ್‌ ಕಂಪನಿ ಈಗಾಗಲೇ ಬೆಳಗಾವಿಯಲ್ಲಿ ಏರೋಸ್ಪೇಸ್‌ ಉದ್ಯಮಕ್ಕೆ ಬೇಕಾಗುವ ಬಿಡಿಭಾಗಗಳನ್ನು ತಯಾರಿಸುತ್ತಿದೆ. ಈಗ ಅದು ಆ್ಯಪಲ್‌ ಫೋನ್‌ಗೆ ಬೇಕಾಗುವ ಬಿಡಿಭಾಗಗಳ ತಯಾರಿಕಾ ಘಟಕವನ್ನು ರಾಜ್ಯದಲ್ಲಿ ತೆರೆಯಲು ಮನಸ್ಸು ಮಾಡಿದೆ. ಇದರಿಂದ ಮುಂದಿನ ಮೂರು ವರ್ಷಗಳಲ್ಲಿ 500 ಜನ ತಂತ್ರಜ್ಞರಿಗೆ ಉದ್ಯೋಗ ಸಿಗಲಿದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ.
ಇದರ ಜತೆಗೆ ಪರೋಕ್ಷವಾಗಿ ನೂರಾರು ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಿಂದ ರಾಜ್ಯದ ಆರ್ಥಿಕತೆಗೂ ಲಾಭವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಬೆಳಗಾವಿಯನ್ನು ರಾಜ್ಯದ ಪ್ರಮುಖ ಉದ್ಯಮ ವಲಯಗಳಲ್ಲಿ ಒಂದಾಗಿ ಬೆಳೆಸಲಾಗುತ್ತಿದ್ದು, ಅಲ್ಲಿ ಸಂಪರ್ಕ ವ್ಯವಸ್ಥೆ ಚೆನ್ನಾಗಿದೆ. ಇದು ಮುಂಬೈ-ಬೆಂಗಳೂರು-ಚೆನ್ನೈ ಕಾರಿಡಾರ್‍‌ನಲ್ಲಿ ಬರುವುದರಿಂದ ಔದ್ಯಮಿಕ ಬೆಳವಣಿಗೆಗೆ ಅಪಾರ ಅವಕಾಶಗಳಿವೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರಕಾರವು ತೀರ್ಮಾನಿಸಿದೆ ಎಂದು ಹೇಳಿದರು.
ಇದನ್ನೂ ಓದಿ:1 ಕೋಟಿ ರೂ. ಕೊಟ್ಟರೂ ಕುರಿ ಕೊಡುವುದಿಲ್ಲ ಎಂದು ಈ ವ್ಯಕ್ತಿ ಹೇಳಿದ್ಯಾಕೆ?; ಇಲ್ಲಿದೆ ಅಚ್ಚರಿ ಸುದ್ದಿ!
ಈ ಸಂದರ್ಭದಲ್ಲಿ ಎಸ್‌ಎಫ್‌ಎಸ್‌ ಕಂಪನಿಯ ನಿರ್ದೇಶಕ ಪ್ರಶಾಂತ್‌ ಕೋರೆ, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ ಉಪಸ್ಥಿತರಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 5 =
Remember me
