ಬೆಂಗಳೂರು:ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಚುನಾವಣೆ ಉದ್ದೇಶದಲ್ಲಿ ಶುಕ್ರವಾರ ಸಭೆಗಳನ್ನು ನಡೆಸಲಿದ್ದು, ತಮ್ಮ ಪಕ್ಷದ ಮುಖಂಡರನ್ನು ಚುನಾವಣೆಗೆ ಸಜ್ಜುಗೊಳಿಸಲಿದ್ದಾರೆ. ಅಮಿತ್ ಶಾ ಅವರು ಗುರುವಾರ ತಡ ರಾತ್ರಿ ಬೆಂಗಳೂರಿಗೆ ಆಗಮಿಸಿದರೆ, ರಾಹುಲ್ ಗಾಂಧಿ ಮಧ್ಯಾಹ್ನವೇ ಆಗಮಿಸಿ ತುಮಕೂರಿಗೆ ಭೇಟಿ ನೀಡಿ ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಬ್ಬರು ಸಹ ಪಕ್ಷದ ಸಭೆಗಳಲ್ಲಿ ಭಾಗವಹಿಸಿ ಚುನಾವಣೆಗೆ ವೇದಿಕೆ ಸಜ್ಜುಗೊಳಿಸಲಿದ್ದಾರೆ.
ಸಂಜೆ ಕೋರ್ ಕಮಿಟಿ:ಅಮಿತ್ ಷಾ ಅವರು ಪಕ್ಷದ ಕೋರ್ ಕಮಿಟಿ ಸಭೆಯನ್ನು ನಡೆಸಲಿದ್ದಾರೆ. ಪಕ್ಷದ ಮಟ್ಟಿಗೆ ಅವರು ಭಾಗವಹಿಸುವುದು ಅದೊಂದೆ ಸಭೆ. ಆದರೆ ರಾಹುಲ್ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಐದಾರು ಸಭೆಗಳನ್ನು ನಡೆಸಲಿದ್ದಾರೆ. ಬಿಜೆಪಿ ಮೂಲಗಳಿಂದ ಮಾಹಿತಿ ಪ್ರಕಾರ ಸರ್ಕಾರಕ್ಕೆ ಇನ್ನಷ್ಟು ವೇಗ ನೀಡುವುದು, ಕಾರ್ಯಕರ್ತರಿಗೆ ಅಧಿಕಾರ ನೀಡುವುದು, ಶಾಸಕರಿಗೆ ಮಂತ್ರಿಗಳ ಸ್ಪಂದನೆ, ಪಕ್ಷದ ಸಂಘಟನೆ, ಹಿಜಾಬ್, ಹಲಾಲ್​ನಂತಹ ಭಾವನಾತ್ಮಕ ವಿಚಾರಗಳಿಂದ ಪಕ್ಷಕ್ಕೆ ಆಗುವ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಷಾ ಅವರ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೊಂದು ಮೂಲದ ಪ್ರಕಾರ ಹೆಚ್ಚು ಚರ್ಚೆಗೆ ಅವಕಾಶವಿಲ್ಲದೆ, ಅವರೊಬ್ಬರೇ ಮಾತನಾಡಿ ಹೋಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯನ್ನು ಪಕ್ಷದ ರಾಜ್ಯ ನಾಯಕರು ಸಾಲುಗಟ್ಟಿ ನಿಂತು ವಿಮಾನ ನಿಲ್ದಾಣದಲ್ಲಿ ಆದರದಿಂದ ಬರಮಾಡಿಕೊಂಡರು. ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತಾವು ಪ್ರಯಾಣಿಸುವ ಕಾರಿನಲ್ಲೇ ರಾಹುಲ್ ಗಾಂಧಿ ಕರೆದೊಯ್ದರು. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೇ ಚಾಲಕರ ಪಾತ್ರ ನಿಭಾಯಿಸಿದರು. ಈ ವೇಳೆ ಅನೌಪಚಾರಿಕ ಚರ್ಚೆ ನಡೆಸಿದ್ದು, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತಂತೆ ರಾಹುಲ್ ಮಾಹಿತಿ ಪಡೆದುಕೊಂಡರು. ಸರ್ಕಾರದ ಆಗುಹೋಗುಗಳ ಬಗ್ಗೆ ತಿಳಿದುಕೊಂಡರು. ಪ್ರಮುಖವಾಗಿ ರಾಜ್ಯದಲ್ಲಿ ನಡೆದಿರುವ ರಾಜಕೀಯ ಧ್ರುವೀಕರಣ, ಅದರ ಸುತ್ತಲಿನ ರಾಜಕೀಯ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದು, ಇದಕ್ಕೆ ಪರ್ಯಾಯವಾಗಿ ಪಕ್ಷದ ಇಮೇಜ್ ಹೆಚ್ಚಿಸಲು ಯೋಜನೆ ರೂಪಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಭೆ ರದ್ದು:ಬಿಬಿಎಂಪಿ ಚುನಾವಣೆ ಕುರಿತಂತೆ ನಿಗದಿಯಾಗಿದ್ದ ಸಭೆಯನ್ನು ರದ್ದುಗೊಳಿಸಲಾಯಿತಲ್ಲದೆ, ಹಿರಿಯ ನಾಯಕರ ಸಭೆಯನ್ನೂ ಮುಂದೂಡಲಾಯಿತು. ಪುನೀತ್ ರಾಜ್​ಕುಮಾರ್ ಅವರ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ರಾಹುಲ್ ಸಾಂತ್ವನ ಹೇಳಿದರು. ಶುಕ್ರವಾರ ಅವರು ಮಹತ್ವದ ಸಭೆ ನಡೆಸಲಿದ್ದು, 2018ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಪಕ್ಷದ ಶಾಸಕರು, ಸೋತ ಅಭ್ಯರ್ಥಿಗಳು, ಪರಿಷತ್ ಸದಸ್ಯರ ಸಭೆ ಕರೆದಿದ್ದು, ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರಾಹುಲ್ ಪ್ರಧಾನ ಭಾಷಣ ಮಾಡಲಿದ್ದಾರೆ. ಕಾರ್ಯಕಾರಿಣಿ ಸಭೆ ಬಳಿಕ ಮುಂಚೂಣಿ ಘಟಕಗಳ ಜತೆ ಸಭೆ, ಪ್ರಮುಖ ನಾಯಕರ ಜತೆ ಸಭೆ ನಡೆಸಲಿದ್ದಾರೆ. ಸಭೆಗಳಲ್ಲಿ ಬೆಲೆ ಏರಿಕೆ ವಿರುದ್ಧ ನಿರಂತರ ಹೋರಾಟ, ಭ್ರಷ್ಟಾಚಾರದ ವಿರುದ್ಧ ದನಿ ಎತ್ತುವುದು ಈ ಮೂಲಕ ಕ್ಷೇತ್ರದ ಜನರಿಗೆ ಹತ್ತಿರ ಆಗುವಂತೆ ಅವರು ಸೂಚನೆ ನೀಡಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ; ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ, ಕುಟುಂಬಸ್ಥರಿಗೆ ಸಾಂತ್ವಾನ

ನಶೆಯಲ್ಲಿ ನೇಪಾಳಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ; ಡಿಜೆ ಹಳ್ಳಿ ಪೊಲೀಸರಿಂದ ನಟೋರಿಯಸ್ ರೌಡಿಶೀಟರ್ ಬಂಧನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
