ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರಿದಿದ್ದು, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಅತಿ ಹೆಚ್ಚು 323.02 ಮಿಮೀ ಮಳೆ ಸುರಿದಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಜೂ.29ರಿಂದ 3 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಜು.2ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ಸಾಮಾನ್ಯ ಮಳೆ:ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸಾಮಾನ್ಯದಿಂದ ಉತ್ತಮ ಮಳೆಯಾಗಿದೆ. ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೊಷಿಸಿದ್ದು, ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕಲಬುರಗಿ ಜಿಲ್ಲೆಯ ಬಹುತೇಕ ಕಡೆ ಭಾನುವಾರ ನಸುಕಿನ ಜಾವ ಮಳೆ ಭರ್ಜರಿಯಾಗಿ ಸುರಿದಿದೆ.
ಕೆಲವೆಡೆ ರಸ್ತೆ ಸೇತುವೆಗಳ ಮೇಲೆ ನೀರು ಹರಿದು ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡರೆ, ತಗ್ಗು ಪ್ರದೇಶದ ಮನೆ-ವಾಣಿಜ್ಯ ಸಂಕೀರ್ಣಕ್ಕೆ ನೀರು ಹೊಕ್ಕಿದೆ. ಬಿತ್ತನೆ ಮಾಡಿದ ಹೊಲ-ಗದ್ದೆಗಳು ಜಲಾವೃತಗೊಂಡು ಮೊಳಕೆ ಒಡೆದಿದ್ದ ಬೆಳೆಗಳು ಕೊಚ್ಚಿ ಹೋಗಿವೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಯ ಹಲವೆಡೆ ಭಾನುವಾರ ಧಾರಾಕಾರ ಮಳೆಯಾಗಿದೆ. ಮೈಸೂರಿನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು. ಪರಿಣಾಮ ಹಲವೆಡೆ ರಸ್ತೆಗಳು ಜಲಾವೃತವಾಗಿ ಸಂಚಾರ ಅಸ್ತವ್ಯಸ್ತಗೊಂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − thirteen =
Remember me
