ಬೆಂಗಳೂರು:ಕಾಂಗ್ರೆಸ್ ಪಕ್ಷ​ ಅಧಿಕಾರ ಬಂದ ಕೂಡಲೇ ಚುನಾವಣೆಗೂ ಮುನ್ನ ಘೋಷಿಸಿದ್ದ ಶಕ್ತಿ ಯೋಜನೆಯನ್ನು ಜಾರಿಗೆ ತರಲು ಸಕಲ ತಯಾರಿ ಮಾಡಿಕೊಳ್ಳುತ್ತಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಕಲ್ಪಿಸುವುದು ಈ ಶಕ್ತಿ ಯೋಜನೆಯ ಉದ್ದೇಶವಾಗಿದೆ.
ಜೂನ್​ 11ರಂದು ಈ ಯೋಜನೆ ಜಾರಿಗೆ ಬರಲಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಂದಿನಿಂದ ಮಹಿಳೆಯರು ರಾಜ್ಯದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಕೆಲವು ಷರತ್ತುಗಳನ್ನು ಹಾಕಿದೆ. ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್‌ಪ್ರೆಸ್ ಬಸ್​ನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಿಎಂಟಿಸಿ ಮತ್ತು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಅವಕಾಶ ಇದೆ. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್​ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಅಂತಾರಾಜ್ಯ ಪ್ರಯಾಣಕ್ಕೆ ಉಚಿತ ಸೌಲಭ್ಯ ಇರುವುದಿಲ್ಲ.
ಇದನ್ನೂ ಓದಿ:ಒಡಿಶಾ ರೈಲು ದುರಂತ: ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿದ ನಟಿ ಪ್ರಿಯಾ ಆನಂದ್!​
ಉಚಿತ ಪ್ರಯಾಣದ ವೇಳೆ ಮಹಿಳೆರಿಗೆ ಟಿಕೆಟ್​ ಕೊಡುತ್ತಾರಾ? ಅಥವಾ ಯಾವುದಾದರೂ ದಾಖಲೆ ತೆಗೆದುಕೊಂಡು ಹೋಗಬೇಕಾ ಎಂಬ ಗೊಂದಲ ಮಹಿಳೆಯರಲ್ಲಿದೆ. ಆದರೆ, ಆ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಬಸ್​ನಲ್ಲಿ ಟಿಕೆಟ್ ಪಡೆಯುವ ಗೋಜಿಲ್ಲ ಅಂತ ಮಹಿಳೆಯರು ಅಂದುಕೊಳ್ಳಬೇಡಿ. ಏಕೆಂದರೆ, ಕಂಡಕ್ಟರ್​ ಮಹಿಳೆಯರಿಗೂ ಟಿಕೆಟ್ ಕೊಡುತ್ತಾರೆ.
ಯೋಜನೆ ಜಾರಿಗೂ ಮೊದಲು ನಾಲ್ಕು ನಿಗಮಗಳಲ್ಲೂ ಇದಕ್ಕಾಗಿ ಭಾರೀ ತಯಾರಿ ಕೂಡ ನಡೆಯುತ್ತಿದೆ. ಶಕ್ತಿ ಯೋಜನೆಯ ಹೊಸ ಟಿಕೆಟ್ ಈಗ ರಚನೆಯಾಗಿದೆ. ಟಿಕೆಟ್​ ಮೇಲೆ “ಮಹಿಳಾ ಪ್ರಯಾಣಿಕರ ಉಚಿತ ಚೀಟಿ ಶಕ್ತಿ ಯೋಜನೆ” ಎಂದು ಬರೆದಿರುತ್ತಾರೆ ಮತ್ತು ಟಿಕೆಟ್​ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್​ ಬಳಿ ಟಿಕೆಟ್​ ಪಡೆದುಕೊಳ್ಳಬೇಕು. ಆದರೆ, ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ.(ದಿಗ್ವಿಜಯ ನ್ಯೂಸ್​)

ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ ವ್ಯಕ್ತಿಗೆ ಅಭಿಮಾನಿಗಳಿಂದ ಕಪಾಳಮೋಕ್ಷ

ಪ್ರತಿದಿನ 4 ಲಕ್ಷ ರೂ. ಸಂಪಾದನೆ: ವಿಕಿಪೀಡಿಯಾವೂ ತಪ್ಪು ಹೇಳ್ತಿದೆ ಎಂದು ಕಷ್ಟದ ದಿನಗಳನ್ನು ನೆನೆದ ಶಕೀಲಾ

ಶಿವಾಜಿನಗರ ಮಹಿಳಾ ಠಾಣೆಯ ಇನ್ಸ್​ಪೆಕ್ಟರ್​​ ಸುಮಾ ಸಸ್ಪೆಂಡ್: ಕಾರಣ ಹೀಗಿದೆ…​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 9 =
Remember me
