ಬೆಂಗಳೂರು:ರಾಜ್ಯ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ರಜನೀಶ್​ ಪತ್ನಿ ಶಾಲಿನಿ ರಜನೀಶ್‌ ಅವರು ಮುಂದಿನ ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ.
ಇದನ್ನೂ ಓದಿ:ವೀಲ್​ಚೇರ್​ನಲ್ಲೇ ಬಂದು ಪ್ರಧಾನಿ ಮೋದಿ ಭೇಟಿಯಾದ ಎಚ್‌ಡಿ ದೇವೇಗೌಡ: ಇಲ್ಲಿವೆ ಪೋಟೋಗಳು…!
ಇಂದು (ಜುಲೈ 26) ನಡೆದ ಸಚಿವ ಸಂಪುಟದಲ್ಲಿ ಶಾಲಿನಿ ರಜನೀಶ್​ರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ಆಗಿ ಮಾಡಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ. ಪಾಟೀಲ್‌ ಅವರು ಶಾಲಿನಿ ರಜನೀಶ್‌ ಅವರ ನೇಮಕದ ಕುರಿತು ಮಾಹಿತಿ ನೀಡಿದರು.
ರಾಜ್ಯ ಸಂಪುಟ ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಎಚ್​ಕೆ ಪಾಟೀಲ್ ಅವರು, ಹಾಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಇನ್ನು ಐದು ದಿನದಲ್ಲಿ​ ನಿವೃತ್ತಿಯಾಗಲಿದ್ದಾರೆ. ಇದರಿಂದ ನೂತನ ಸಿಎಸ್​ ಆಗಿ ಶಾಲಿನಿ ರಜನೀಶ್​ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಶಾಲಿನಿ ರಜನೀಶ್‌ ಅವರು ಈಗ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ. ರಜನೀಶ್‌ ಗೋಯಲ್‌ ಅವರ ನಂತರ ಜ್ಯೇಷ್ಠತೆಯ ಆಧಾರದ ಮೇಲೆ ರೇಸ್‌ನಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌ ಹಾಗೂ ಶಾಲಿನಿ ರಜನೀಶ್‌ ಅವರಿದ್ದರು. ಈಗ ರಾಜ್ಯ ಸರ್ಕಾರ ಶಾಲಿನಿ ರಜನೀಶ್‌ ಅವರಿಗೇ ಮಣೆ ಹಾಕಿದೆ. 2027ರ ಜೂನ್‌ಗೆ ಇವರು ನಿವೃತ್ತಿ ಹೊಂದಲಿದ್ದಾರೆ.
ಅಜಯ್‌ ಸೇಠ್‌ ಅವರು ಇನ್ನು 11 ತಿಂಗಳು ಮಾತ್ರ ಅಧಿಕಾರದಲ್ಲಿ ಇರುವುದರಿಂದ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ದ್ವಿತೀಯ ದಂಪತಿ ಎಂಬ ಖ್ಯಾತಿಗೆ ಶಾಲಿನಿ ರಜನೀಶ್‌ ಹಾಗೂ ರಜನೀಶ್‌ ಗೋಯಲ್‌ ಪಾತ್ರರಾದರು. ಇದಕ್ಕೂ ಮೊದಲು ಬಿ.ಕೆ.ಭಟ್ಟಾಚಾರ್ಯ ಹಾಗೂ ತೆರೇಸಾ ಭಟ್ಟಾಚಾರ್ಯ ದಂಪತಿಯು ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿದ್ದರು.
ಪೀಣ್ಯ ಮೇಲ್ಸೇತುವೆ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತ: ಆದರೆ ಕಂಡೀಷನ್ಸ್ ಅಪ್ಲೈ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:16 + eight =
Remember me
