ದಾವಣಗೆರೆ:ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಸಿಎಂ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಮುಖ್ಯಮಂತ್ರಿಯಾಗುವ ಅವಕಾಶ ಕೊಡುವಂತೆ ಮನವಿ ಮಾಡಿದರು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ಇದೀಗ ವಿರೋಧ ಪಕ್ಷಗಳಲ್ಲಿ ದೊಡ್ಡ ಚರ್ಚೆಯೇ ಭುಗಿಲೇದ್ದಿದೆ.
ಇದನ್ನೂ ಓದಿ:ಟಿಇಟಿ ಪರೀಕ್ಷೆಗೆ 3,892 ನೋಂದಣಿ: ಡಿಸಿ ಕಚೇರಿ ಸಹಾಯಕಿ ಡಾ.ರೋಹಿಣಿ ಮಾಹಿತಿ
ಡಿಕೆಶಿ ಅವರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಸಿದ್ದರಾಮಯ್ಯ ಅವರಿಂದ ಸಾಧ್ಯವಿದೆ. ಈಗಾಗಲೇ ಸಿಎಂ ಆಗಿ ಸಿದ್ದರಾಮಯ್ಯನವರು ಆಡಳಿತ ನಡೆಸಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಸ್ವಾಮೀಜಿ ಹೇಳಿದರು. ಸದ್ಯ ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೈ ನಾಯಕರು, ಸಿಎಂ ಮತ್ತು ಡಿಸಿಎಂ ಯಾರಾಗಬೇಕು? ಯಾರಿರಬೇಕು ಎಂಬುದನ್ನು ನಿರ್ಧಾರ ಮಾಡಲು ಹೈಕಮಾಂಡ್ ಇದೆ ಎಂದು ಹೇಳಿದೆ.

ಇನ್ನು ಈ ಬಗ್ಗೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ ಕಾಂಗ್ರೆಸ್​ನ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, “ಚಂದ್ರಶೇಖರನಾಥ ಸ್ವಾಮೀಜಿ ಹೇಳಿದರು ಎಂದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್​ರನ್ನು ಕೂರಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಸ್ಥಾನಕ್ಕೆ ಯಾರಿರಬೇಕು? ಯಾರನ್ನು ಕೂರಿಸಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಸಿಎಂ ಆಗಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನಡೆಸಿದ್ದಾರೆ” ಎಂದು ಹೇಳಿದರು.
ಎದೆಯಲ್ಲಿ ಕುದಿಯುತ್ತಿದ್ದ ಸೇಡು ಜ್ವಾಲೆಯಂತೆ ಸ್ಫೋಟ; ಈ ಕ್ಷಣಕ್ಕಾಗಿಯೇ ಕಾದು ಕುಳಿತಿದ್ದರು ಅಭಿಮಾನಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + nine =
Remember me
