ಶಿರಹಟ್ಟಿ:ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿ, ಕುಗ್ರಾಮದಲ್ಲಿ ಕಲಿತ ಕುವರಿ ಈಗ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಆಗುವ ಮೂಲಕ ಇತರರಿಗೆ ಮಾದರಿ ಆಗಿದ್ದಾರೆ. ಶಿರಹಟ್ಟಿ ತಾಲೂಕಿನ ನವೇಭಾವನೂರ ಗ್ರಾಮದ ಸಹನಾ ಫಕ್ಕೀರಗೌಡ ಪಾಟೀಲ ಪಿಎಸ್‌ಐ ನೇಮಕಾತಿ ಪಟ್ಟಿಯ ಮಹಿಳಾ ಮೀಸಲಾತಿಯಲ್ಲಿ ರಾಜ್ಯಕ್ಕೆ 26ನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಇವರು ನವೇಭಾವನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ, ಪಕ್ಕದ ಮಾಚೇನಹಳ್ಳಿ ಸರ್ಕಾರಿ ಹೈಸ್ಕೂಲ್‌ನಲ್ಲಿ ಪ್ರೌಢ, ಶಿರಹಟ್ಟಿಯ ಡಬಾಲಿ ಕಾಲೇಜ್‌ನಲ್ಲಿ ಪಿಯುಸಿ, ಶಿರಹಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಪದವಿ ಶಿಕ್ಷಣ ಮುಗಿಸಿ, ಬಳಿಕ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಇದನ್ನೂ ಓದಿ:ಸಿರಗುಪ್ಪದಲ್ಲಿ ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ಮದ್ಯದಂಗಡಿ ಮಚ್ಚಿಸಿದ ಅಬಕಾರಿ ಇಲಾಖೆ
ಉಪನ್ಯಾಸಕಿ ಆಗಬೇಕೆಂಬ ಆಸೆಯಿಂದ ಕೆಲ ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದರು. 2019ರಲ್ಲಿ ಮೊದಲ ಪ್ರಯತ್ನದಲ್ಲಿ ಆಗಿರದಿದ್ದರೂ 2020ರಲ್ಲಿ ಪಿಎಸ್‌ಐ ಹುದ್ದೆಗೆ ಅರ್ಜಿ ಆಹ್ವಾನಿಸಿದಾಗ ಸಕಲ ಸಿದ್ಧತೆಯೊಂದಿಗೆ ಮತ್ತೆ ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ 200ರಲ್ಲಿ 137 ಅಂಕ ಪಡೆದು ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ 26ನೇ ಸ್ಥಾನ ಪಡೆದಿದ್ದಾಳೆ.
ಹೆಮ್ತಾಬಾದ್ ಬಿಜೆಪಿ ಶಾಸಕನ ಡೆತ್ ಕೇಸ್​ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ; ಸಿಬಿಐ ತನಿಖೆಗೆ ಆಗ್ರಹಿಸಿದೆ ಕುಟುಂಬ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × five =
Remember me
