
ಬೆಂಗಳೂರು:ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್)ಗೆ ಕೇಂದ್ರ ವಿದ್ಯುತ್ ಪ್ರಾಧಿಕಾರ ಶುಕ್ರವಾರ ಅನುಮೋದನೆ ನೀಡಿದೆ.ಕರ್ನಾಟಕ ವಿದ್ಯುತ್ ನಿಗಮ ಅನುಷ್ಠಾನಗೊಳಿಸುತ್ತಿರುವ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಯೋಜನೆಗೆ ದಾಖಲೆ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ವಿದ್ಯುತ್ ಸಚಿವಾಲಯದ ಪ್ರಕಟಣೆ ತಿಳಿಸಿದೆ.ಲಿಂಗನಮಕ್ಕಿ ಜಲಾಶಯದ ಕೆಳಭಾಗದಲ್ಲಿರುವ ಶಿವಮೊಗ್ಗದ ತಲಕಳಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ ಜಲಾಶಯಗಳ ಮಧ್ಯ ಭಾಗದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದೆ.ದೇಶದ ಹೈಡ್ರೋ ಪಂಪ್ಡ್ ಸ್ಟೋರೇಜ್ ಯೋಜನೆಗಳ ಅನುಷ್ಠಾನವನ್ನು ವೇಗಗೊಳಿಸಲು ಅನುಮೋದನೆ ಪ್ರಕ್ರಿಯೆಯನ್ನು ಕೇಂದ್ರ ವಿದ್ಯುತ್ ಪ್ರಾಧಿಕಾರ ಪರಿಷ್ಕರಿಸಿದೆ. ಶರಾವತಿ ಜತೆಗೆ ಒಡಿಶಾದಲ್ಲಿ 600 ಮೆಗಾವ್ಯಾಟ್ ಇಂದ್ರಾವತಿ ಯೋಜನೆಗೂ ಪ್ರಾಧಿಕಾರ ಅನುಮೋದನೆ ನೀಡಿದೆ.ಒಮ್ಮೆ ಹರಿದುಹೋಗಿ ವಿದ್ಯುತ್ ಉತ್ಪಾದನೆ ಮಾಡಿಕೊಂಡ ನೀರನ್ನೇ ಮತ್ತೆ ಮೇಲಕ್ಕೆ ಪಂಪ್ ಮಾಡಿ ಅದೇ ನೀರಿನಿಂದ ಎರಡನೇ ಬಾರಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಇದಕ್ಕೆ ಸ್ವಲ್ಪ ವಿದ್ಯುತ್ ವೆಚ್ಚವಾಗುತ್ತದೆಯೇ ಹೊರತು ಮತ್ತೇನೂ ಬೇಕಿಲ್ಲ. ಒಂದು ಹನಿ ನೀರನ್ನೇ ಹಲವಾರು ಬಾರಿ ಬಳಕೆ ಮಾಡಿ ವಿದ್ಯುತ್ ಉತ್ಪಾದನೆ ಮಾಡುವುದು ಉತ್ತಮ ವಿಧಾನವಾಗಿದೆ.
ಧನ್ಯವಾದ ತಿಳಿಸಿದ ಸಚಿವ ಜಾರ್ಜ್:ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಗೆ ಶರತಾವತಿ ಯೋಜನೆ ಅನಿವಾರ್ಯವಾಗಿದ್ದು, ಪರಿಸರಕ್ಕೆ ಹಾನಿಯಾಗದಂತೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ವಿದ್ಯುತ್ಛಕ್ತಿ ಪ್ರಾಧಿಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಧನ್ಯವಾದ ತಿಳಿಸಿದ್ದಾರೆ.ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ತ್ವರಿತ ಕ್ರಮಗಳನ್ನು ಕೈಗೊಂಡು ಕೇಂದ್ರದಿಂದ ಅಗತ್ಯ ಅನುಮತಿಗಳನ್ನು ಪಡೆಯಲು ಪ್ರಸ್ತಾವನೆಗಳನ್ನು ಕಳುಹಿಸಲಾಗಿತ್ತು. ಇದೀಗ, ಕೇಂದ್ರದ ಪ್ರಾಧಿಕಾರ ಡಿಪಿಆರ್‌ಗೆ ಒಪ್ಪಿಗೆ ನೀಡಿರುವುದು ನಮ್ಮ ಪ್ರಯತ್ನಕ್ಕೆ ಸಿಕ್ಕ ಫಲ. ಇನ್ನುಳಿದ ಅನುಮತಿಗಳನ್ನು ಶೀಘ್ರದಲ್ಲೇ ಪಡೆದು ಯೋಜನೆಯ ಅನುಷ್ಠಾನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧ ಎಂದಿದ್ದಾರೆ.
*ನವೀಕರಿಸಬಹುದಾದ ಸಾಮರ್ಥ್ಯ ಹೆಚ್ಚಿಸುವ ಮೂಲಕ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಹೈಡ್ರೋ ಪಂಪ್ಡ್ ಸ್ಟೋರೇಜ್ ಪ್ರಾಜೆಕ್ಟ್‌ಗಳು (ಪಿಎಸ್‌ಪಿ) ಅಗತ್ಯವಿದೆ. ನೀರನ್ನು ಪುನರ್ಬಳಕೆ ಮಾಡುವುದರಿಂದ, ನೀರಾವರಿ ಯೋಜನೆಗೆ ನೀರಿನ ಕೊರತೆಯಾಗುವುದಿಲ್ಲ, ಬೇಸಿಗೆಯಲ್ಲೂ ನೀರಿನ ಕೊರತೆ ಇದ್ದಾಗ ನಿರಂತರವಾಗಿ ವಿದ್ಯುತ್ ಉತ್ಪಾದನೆ ಸಾಧ್ಯವಾಗುತ್ತದೆ.-ಗೌರವ್ ಗುಪ್ತಾ, ಅಪರ ಮುಖ್ಯಕಾರ್ಯದರ್ಶಿ, ಇಂಧನ ಇಲಾಖೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − one =
Remember me
