ಬೆಂಗಳೂರು:ಏ.4ರಂದು ಮೌಂಟ್ ಕಾರ್ವೆಲ್ ಕಾಲೇಜು ಬಳಿಯ ರೈಲ್ವೆ ಅಂಡರ್ ಪಾಸ್​ನಲ್ಲಿ ಪಿಲ್ಲರ್​ಗೆ ಕಾರು ಡಿಕ್ಕಿ ಪ್ರಕರಣ ಸಂಬಂಧ ತನಿಖಾಧಿಕಾರಿಗಳು ನಟಿ ಶರ್ವಿುಳಾ ಮಾಂಡ್ರೆ ಹೇಳಿಕೆ ಪಡೆದಿದ್ದಾರೆ.
ಅಪಘಾತದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶರ್ವಿುಳಾ ಮಾಂಡ್ರೆ, ಗುಣಮುಖಗೊಂಡ ಬಳಿಕ ತನಿಖಾಧಿಕಾರಿ ಗಳ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಅಂದು ರಾತ್ರಿ ಹೊಟ್ಟೆ ನೋವು ಇದ್ದ ಕಾರಣಕ್ಕೆ ಸ್ನೇಹಿತರ ಕಾರು ತರಿಸಿಕೊಂಡು ಆಸ್ಪತ್ರೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಕಾರನ್ನು ಡಾನ್ ಥಾಮಸ್ ಡ್ರೖೆವಿಂಗ್ ಮಾಡುತ್ತಿದ್ದರು. ಆತನ ಪಕ್ಕದಲ್ಲಿ ಯುವತಿ ಕುಳಿತಿದ್ದಳು. ಚಾಲಕನ ಹಿಂಬದಿ ಸೀಟಿನಲ್ಲಿ ಶರ್ವಿುಳಾ ಹಾಗೂ ಲೋಕೇಶ್ ವಸಂತ್ ಕುಳಿತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಚಾಲಕನಿಗೆ ಈಗಾಗಲೇ ಜಾಮೀನು ದೊರೆತಿದೆ. ಕೋವಿಡ್-19 ಪಾಸ್ ದುರುಪಯೋಗಪಡಿಸಿಕೊಂಡ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿವಾರ್ನರ್ ದಂಪತಿ ಬುಟ್ಟ ಬೊಮ್ಮ ಸ್ಟೆಪ್! ಟಾಲಿವುಡ್​ ನಟ ಅಲ್ಲು ಅರ್ಜುನ್​ ಕ್ಲೀನ್​ ಬೌಲ್ಡ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
