ಬೀದರ್:ಬೇಡ ಜಂಗಮರಿಗೆ ಎಸ್ಸಿ ಎಸ್ಟಿ ಜಾತಿ ಪ್ರಮಾಣ ಪತ್ರ ನೀಡುವಂತೆ ಶಿಫಾರಸು ನೀಡಿದ್ದಾರೆ ಎನ್ನಲಾದ ಶಾಸಕರ ವಿರುದ್ಧ ವಿರುದ್ಧ ಬೃಹತ್ ಪ್ರತಿಭಟನಾ ಪ್ರದರ್ಶನ ಇಂದು ಇಲ್ಲಿ ನಡೆಯಿತು.
ಹುಮ್ನಾಬಾದ್ ಶಾಸಕ ರಾಜಶೇಖರ ಪಾಟೀಲ್, ಬೀದರ್ ಉತ್ತರ ಶಾಸಕ ರಹೀಂಖಾನ್, ಬಸವಕಲ್ಯಾಣ ಶಾಸಕ ಶರಣು ಸಲಗರ್, ವಿಧಾನಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್, ಭೀಮರಾವ್ ಪಾಟೀಲ್ ಅವರ ವಿರುದ್ಧ ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರೋಧಿ ಹೋರಾಟ ಸಮಿತಿಯಿಂದ ಈ ಪ್ರತಿಭಟನೆ ಮಾಡಲಾಯಿತು. ವಿವಿಧ ದಲಿತ ಪರ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು. ವಿವಿಧ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರು ಆಗಮಿಸಿ ಈ ಹೋರಾಟದಲ್ಲಿ ಭಾಗವಹಿಸಿದ್ದರು.
ವೀರಶೈವ ಹಾಗೂ ಲಿಂಗಾಯತರು ಬೇಡ ಜಂಗಮರ ಹೆಸರಿನಲ್ಲಿ ಮೀಸಲಾತಿಯನ್ನು ಕಬಳಿಸುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಧಿಕಾರಿ ಕಚೇರಿ ಹಾಗೂ ಅಂಬೇಡ್ಕರ್ ವೃತ್ತದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
