ಬೆಂಗಳೂರು:ಪಾದರಾಯನಪುರ ಹಲ್ಲೆಕೋರ ದುಷ್ಕರ್ವಿುಗಳನ್ನು ರಾಮನಗರದ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ ಸರ್ಕಾರದ ನಡೆಯನ್ನು ಗೃಹಸಚಿವ ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ.
ಸರ್ಕಾರದ ಈ ಕ್ರಮ ಮಾಜಿ ಸಿಎಂ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಕೆರಳಿಸಿತ್ತು. ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಎಚ್​ಡಿಕೆ, ಪಾದರಾಯನಪುರದ ದುಷ್ಕರ್ವಿುಗಳನ್ನು ರಾಮನಗರ ಜೈಲಿಗೆ ಕರೆತಂದು ಸರ್ಕಾರ ಘೊರ ತಪ್ಪು ಎಸಗಿದೆ ಎಂದು ಕಿಡಿಕಾರಿದ್ದರು.
ಶಿಫ್ಟ್ ಮಾಡಿದ್ದು ತಪ್ಪಲ್ಲ:ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಎಚ್​ಡಿಕೆ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು, ಪಾದರಾಯನಪುರದ ದುಷ್ಕರ್ವಿು ಗಳನ್ನು ರಾಮನಗರಕ್ಕೆ ಶಿಫ್ಟ್ ಮಾಡಿದ್ದರಲ್ಲಿ ತಪ್ಪಾಗಿಲ್ಲ. ಅದರಲ್ಲಿ ಯಾರದ್ದೂ ತಪ್ಪಿಲ್ಲ. ಕರೊನಾ ಹೋರಾಟದಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಸಮಸ್ಯೆ ಬರುತ್ತಿರುತ್ತವೆ. ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಸರ್ಕಾರದ್ದು ಸಮಯೋಚಿತ ನಿರ್ಣಯ ಎಂದು ಹೇಳಿದರು.
ಪಾದರಾಯನಪುರ ಗಲಭೆ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿ ರಾಮನಗರ ಜೈಲಿನಲ್ಲಿ ಇರಿಸಲಾಗಿದ್ದ ಆರೋಪಿಗಳಲ್ಲಿ ಇಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಅವರಿಂದ ಬೇರೆ ಯಾರಿಗೂ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.
ಅವರಿಗೆ ಯಾರು ಸಲಹೆ ಕೊಡುತ್ತಾರೋ ಗೊತ್ತಿಲ್ಲ ಎಂಬ ಎಚ್​ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಯಾರು ಸಲಹೆ ಕೊಡುತ್ತಾರೆಂಬುದು ಮುಖ್ಯವಲ್ಲ. ಆವತ್ತಿನ ಸಂದರ್ಭದಲ್ಲಿ ಆರೋಪಿಗಳನ್ನು ಜೈಲಿನಲ್ಲಿ ಇಡುವುದು ಅಗತ್ಯವಾಗಿತ್ತು. ಏನೇ ಮಾಡಿದರೂ ಆಪಾದನೆ ಬಂದೇ ಬರುತ್ತವೆ. ಆರೋಪಿಗಳನ್ನು ಜೈಲಿನ ಬದಲು ಆಸ್ಪತ್ರೆಯಲ್ಲಿಟ್ಟಿದ್ದರೂ ಟೀಕೆ ಬರುತ್ತಿತ್ತು. ಸಮಯ, ಸಂದರ್ಭ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಜೈಲಿನಲ್ಲಿ ಆರೋಪಿಗಳಿಗೆ ಸೋಂಕು ಕಂಡು ಬಂದರೆ ಶಿಫ್ಟ್ ಮಾಡುತ್ತೇವೆ ಎಂದು ಕುಮಾರಸ್ವಾಮಿಗೆ ಮೊದಲೇ ಹೇಳಿದ್ದೆವು ಎಂದರು.
ರಾಮನಗರದ ಜೈಲು ಸಿಬ್ಬಂದಿಗೂ ಪರೀಕ್ಷೆ ಮಾಡಿ ಕ್ವಾರಂಟೈನ್​ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಪಾದರಾಯನಪುರ ಠಾಣೆಯ ಪೊಲೀಸರನ್ನೂ ತಪಾಸಣೆ ನಡೆಸಲಾಗುತ್ತಿದೆ. ಅಗತ್ಯವಿದ್ದಲ್ಲಿ ಅವರನ್ನೂ ನಿಗಾ ಬಂಧನದಲ್ಲಿ ಇರಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಲಾಕ್​ಡೌನ್ ನಿಯಮ ಪಾಲನೆಗೆ ಪ್ರಯತ್ನಿಸಿದ ಪೊಲೀಸರ ಮೇಲೆ ಗುಂಪು ದಾಳಿ: ಮೂವರು ಪೊಲೀಸರಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 7 =
Remember me
