ಶಿವಮೊಗ್ಗ:ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣ ಮಾಸುವ ಮುನ್ನವೇ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದೆ.
ಸಾಗರ ನಗರದ ಬಿ.ಎಚ್​.ರಸ್ತೆಯ ಬಸ್ ನಿಲ್ದಾಣ ಬಳಿ ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬುವವರ ಮೇಲೆ ಸಮೀರ್ ಎಂಬಾತ ಮಚ್ಚು ಬೀಸಿದ್ದು, ಅದೃಷ್ಟವಶಾತ್​ ಕೂದಲೆಳೆ ಅಂತರದಲ್ಲಿ ದಾಳಿಯಿಂದ ಸುನೀಲ್ ಪಾರಾಗಿದ್ದಾರೆ. ದಾಳಿಗೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಿನ್ನೆ(ಭಾನುವಾರ) ಶಿವಮೊಗ್ಗದಲ್ಲಿ ಶೌರ್ಯ ಸಂಚಲನ ಯಾತ್ರೆ ನಡೆದಿತ್ತು. ಇದರಲ್ಲಿ ಸುನೀಲ್​ ಭಾಗವಹಿಸಿದ್ದ. ಯಾತ್ರೆಗೆ ಹೋಗುವಾಗ ಸುನೀಲ್​ ಜತೆ ಕಿರಿಕ್ ಮಾಡಿ ಸಮೀರ್ ಎಸ್ಕೇಪ್​ ಆಗಿದ್ದ.
ಇಂದು ಬೆಳಗ್ಗೆ ಸುನೀಲ್ ತನ್ನ ಕಚೇರಿ ಬಳಿಯಿಂದ ಮನೆಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಮೀಪದಲ್ಲೇ ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ನಿಂತಿದ್ದ ಸಮೀರ್​, ಸುನೀಲ್​ನನ್ನು ಕರೆದಿದ್ದಾನೆ. ಬೈಕ್​ನಲ್ಲಿ ಸುನೀಲ್​ ಸಮೀಪಕ್ಕೆ ಬರುತ್ತಿದ್ದಂತೆ ದ್ವಿಚಕ್ರ ವಾಹನದ ಡಿಕ್ಕಿಯಿಂದ ಮಚ್ಚು ಹೊರ ತೆಗೆದು ಸಮೀರ್​ ಹಲ್ಲೆಗೆ ಯತ್ನಿಸಿದ್ದಾನೆ. ಅಷ್ಟರಲ್ಲಿ ಸುನೀಲ್​ ಬೈಕ್​ ಚಲಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಂಡು ಹೋಗಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.
ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಸ್ಯಾಂಟ್ರೋ ರವಿ ‘ಪಿಂಪ್’ ಮಾತ್ರವಲ್ಲ… ಬಗೆದಷ್ಟೂ ಬಯಲಾಗ್ತಿದೆ ಈತನ ಕರಾಳ ಮುಖ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 1 =
Remember me
