ಶಿವಮೊಗ್ಗ:ಇಲ್ಲಿನ ಮಹಾನಗರ ಪಾಲಿಕೆಗೆ ನೂತನ ಮೇಯರ್​, ಡೆಪ್ಯುಟಿ ಮೇಯರ್ ಆಯ್ಕೆ ನಡೆದಿದ್ದು, ಈ ಎರಡೂ ಸ್ಥಾನಗಳು ಬಿಜೆಪಿಗೆ ಪಾಲಾಗಿವೆ. ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್, ಡೆಪ್ಯುಟಿ ಮೇಯರ್ ಆಗಿ ಬಿಜೆಪಿಯ ಲಕ್ಷ್ಮೀ ಶಂಕರನಾಯಕ್ ಆಯ್ಕೆ ಆಗಿದ್ದಾರೆ. ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲ ಬಿಸ್ವಾಸ್ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಘೋಷಣೆ ಮಾಡಲಾಗಿದೆ.
ಇಂದು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಮೇಯರ್ ಹಾಗೂ ಡೆಪ್ಯುಟಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ 26 ಮತ, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ 11 ಮತಗಳ ಚಲಾವಣೆ ನಡೆಯಿತು. ಪಾಲಿಕೆ ಸದಸ್ಯ ನಾಗರಾಜ್ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದರು.
ನೂತನ ಮೇಯರ್ ಹಾಗೂ ಡೆಪ್ಯುಟಿ ಮೇಯರ್​ಗೆ ಶಾಸಕರಾದ ಕೆ.ಎಸ್. ಈಶ್ವರಪ್ಪ, ಆಯನೂರು ಮಂಜುನಾಥ್ ಹಾಗೂ ಕೆ.ಬಿ.ಅಶೋಕ್ ನಾಯಕ್ ಶುಭ ಕೋರಿದ್ದಾರೆ.
‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ನಿರೀಕ್ಷೆಗೂ ಮೀರಿ ನಿಜವಾಯ್ತಾ ಕಾರ್ಣಿಕ?
ರಕ್ತದ ಬದಲು ಮೂಸಂಬಿ ಜ್ಯೂಸ್​ ಕೊಟ್ಟು ರೋಗಿ ಸಾವು ಪ್ರಕರಣ; ಬಯಲಾಯ್ತು ಅಸಲಿ ಕಾರಣ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 5 =
Remember me
