ಶಿವಮೊಗ್ಗ:ಇಬ್ಬರು ಯುವತಿಯರು ಹಾಗೂ ಓರ್ವ ಯುವಕ ಚಲಿಸುತ್ತಿದ್ದ ಬಸ್​ನಿಂದ ಹೊರ ಜಿಗಿದಿರುವ ಘಟನೆ ಸಾಗರ ತಾಲೂಕಿನ ಸಿರಿವಂತೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಶಿಲ್ಪಾ ಹಾಗೂ ಮೇಘನಾ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ಸಿನಲ್ಲಿದ್ದ ಬೆಂಕಿ ನಂದಿಸುವ ಸಿಲಿಂಡರ್​ನಿಂದ ಗ್ಯಾಸ್ ಹೊರಬಂದ ಹಿನ್ನೆಲೆಯಲ್ಲಿ ಮೂವರು ಸಹ ಭಯದಿಂದ ಬಸ್​ನಿಂದ ಹೊರಜಿಗಿದಿದ್ದಾರೆ.
ಇದನ್ನೂ ಓದಿ:ಕೃಷಿ ಕಾಯ್ದೆ ರೈತರಿಗೆ ಸಹಕಾರಿ: ಹೊಸ ಮಾರುಕಟ್ಟೆ-ತಂತ್ರಜ್ಞಾನದ ನೆರವು ಪ್ರಧಾನಿ ಅಭಯ
ಗಾಯಾಳುಗಳು ಸಾಗರದಿಂದ ಜೋಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಗಂಭೀರ ಗಾಯಗೊಂಡಿರುವ ಯುವತಿಯರಿಬ್ಬರಿಗೂ ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
VIDEO| ಬಾಲ್​ ನೋಡದೆ ಸಿಕ್ಸರ್​ ಸಿಡಿಸಿದ ಫ್ಲೆಚರ್: ವೈರಲ್​​ ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರೆಂಟಿ​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
