
ಬೆಂಗಳೂರು:ದೇಶದ ಹಿತ ದೃಷ್ಟಿಯಿಂದ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಏರ್ಪಡಿಸಿದ್ದ ಬೆಂಗಳೂರಿನಲ್ಲಿ ನೆಲೆಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಧುಗಳೊಂದಿಗೆ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಭಿವೃಧಿ ದೃಷ್ಟಿಯಿಂದಲೂ ನಾವು ಚಿಂತನೆ ಮಾಡುವಂತೆಯೂ ಸಲಹೆ ನೀಡಿದರು.ಶಿವಮೊಗ್ಗದಲ್ಲಿ ಕಳೆದ ಎರಡು ಅವಧಿಯಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಇನ್ನಷ್ಟು ಕೆಲಸಗಳನ್ನು ಮಾಡುವುದಕ್ಕೆ ನಿಮ್ಮೆಲ್ಲರ ಬೆಂಬಲ ಅಗತ್ಯವಿದೆ ಎಂದು ಮನವಿ ಮಾಡಿದರು. ಮಾಜಿ ಗೃಹಮಂತ್ರಿ ಅರಗ ಜ್ಞಾನೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ, ಶಾಸಕರಾದ ಗುರುರಾಜ್ ಗಂಟಿಹೊಳೆ, ಶಾರದಾ ಪೂರ್ಯಾನಾಯ್ಕ, ವಿಧಾನಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್. ಅರುಣ್, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ, ಕೆ.ಬಿ. ಅಶೋಕ್ ನಾಯ್ಕ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − six =
Remember me
