ಶಿವಮೊಗ್ಗ: ನಗರದ ಹೊರವಲಯದ ಸೋಮಿನಕೊಪ್ಪದ ಬಳಿ 80 ಅಡಿ ಆಳದ ನಾಲೆಗೆ ಬಿದ್ದಿದ್ದ ಬಿಡಾಡಿ ಕರುವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ತುಂಗಾ ಮೇಲ್ದಂಡೆ ಕಾಲುವೆ ಏರಿ ಮೇಲೆ ಮೇಯತ್ತಿದ್ದ ವೇಳೆ ಆಕಸ್ಮಿಕವಾಗಿ ಕರು ನಾಲೆಗೆ ಬಿದ್ದಿತ್ತು. ಇದೇ ವೇಳೆ ಬರುತ್ತಿದ್ದ ಮೆಸ್ಕಾಂ ಲೈನ್‌ಮ್ಯಾನ್ ಕೃಷ್ಣಮೂರ್ತಿ ಎಂಬುವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕರುವನ್ನು ರಕ್ಷಿಸಿದರು. ರೋಪ್ ಸಹಾಯದಿಂದ ಕೆಳಗಿಳಿದು ರಕ್ಷಿಸಿದರು. ಸಿಬ್ಬಂದಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚಗೆ ವ್ಯಕ್ತಪಡಿಸಿದರು.
ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್‌ಕುಮಾರ್, ಠಾಣಾಧಿಕಾರಿ ಪ್ರವೀಣ್, ಸಹಾಯಕ ಅಧಿಕಾರಿ ಹುಲಿಯಪ್ಪ, ಸಿಬ್ಬಂದಿಗಳಾದ ಸಾಧಿಕ್, ಮಂಜುನಾಥ್, ಶಂಕರ್ ದೇವರಾಜ್ ಕಾರ್ಯಚಾರಣೆಯಲ್ಲಿ ಭಾಗಿಯಾಗಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 1 =
Remember me
