ತುಮಕೂರು:ಜೀವನದಲ್ಲಿ ಒಮ್ಮೆಯೂ ರಾಜಕೀಯ ಸಮಾವೇಶಗಳಲ್ಲಿ ಕಾಣಿಸಿಕೊಳ್ಳದ ಅಮ್ಮಾಜಮ್ಮ ಮೊದಲ ಬಾರಿ ಬೃಹತ್​ ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮ ಉದ್ದೇಶಿಸಿ ಒಂದೆರಡು ಮಾತುಗಳನ್ನಷ್ಟೇ ಹಾಡಿದರು. ‘ನಮ್ಮ ಯಜಮಾನರನ್ನು ಕಳೆದುಕೊಂಡು ತುಂಬಾ ಸಂಕಟದಲ್ಲಿದ್ದೇನೆ. ನೀವು ನನ್ನನ್ನು ನಿಮ್ಮ ಮನೆ ಮಗಳೆಂದು ಈ ಬಾರಿ ದಯವಿಟ್ಟು ನನಗೆ ಮತ ನೀಡಿ’ ಎಂದು ಮನವಿ ಮಾಡಿದರು.
ಶಿರಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್​ ಅಭ್ಯರ್ಥಿಯಾಗಿ ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಕರೊನಾ ಸೋಂಕು ತಗುಲಿ ಆಸ್ಪತ್ರೆಗೆ ಸೇರಿದ್ದ ಅವರು ಸದ್ಯ ಗುಣಮುಖರಾಗಿದ್ದಾರೆ. ನಾಮಪತ್ರ ಸಲ್ಲಿಕೆಗೂ ಬಾರಲು ಸಾಧ್ಯವಾಗದಿದ್ದ ಅಮ್ಮಾಜಮ್ಮ ಬುಧವಾರ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ಜತೆ ಕಾಣಿಸಿಕೊಂಡರು.
ಶಿರಾ ಉಪಸಮರ ಅಖಾಡಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬುಧವಾರ ಅಧಿಕೃತವಾಗಿ ಎಂಟ್ರಿ ಕೊಟ್ಟರು. ಅವರೊಂದಿಗೆ ಅಮ್ಮಾಜಮ್ಮ ಕೂಡ ಸಮಾವೇಶದಲ್ಲಿ ಪಾಲ್ಗೊಂಡು ಮತಯಾಚಿಸಿದರು.
ವಾಸು, ಬಾಬು, ಬೆಮೆಲ್​ ಗೈರು!:ಬಹುತೇಕ ಜೆಡಿಎಸ್​ನಿಂದ ಒಂದು ಕಾಲು ಹೊರತೆಗೆದಿರುವ ಮಾಜಿ ಸಚಿವ, ಶಾಸಕ ಎಸ್​.ಆರ್​.ಶ್ರೀನಿವಾಸ್​, ಮಾಜಿ ಶಾಸಕ ಸಿ.ಬಿ.ಸುರೇಶ್​ಬಾಬು ಹಾಗೂ ವಿಧಾನ ಪರಿಷತ್​ ಸದಸ್ಯ ಬೆಮೆಲ್​ ಕಾಂತರಾಜು ಅವರ ಗೈರು ಸಮಾವೇಶದಲ್ಲಿ ಎದ್ದುಕಾಣುತ್ತಿತ್ತು. ಪಕ್ಷದ ವರಿಷ್ಠ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಶಿರಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದರೂ ಜಿಲ್ಲೆಯ ಪ್ರಮುಖ ನಾಯಕರು ಕಾಣಿಸಿಕೊಳ್ಳಲಿಲ್ಲ.
‘ಧಮ್ಕಿಗಿಮ್ಕಿ ಹಾಕಿದ್ರೆ ಪೊಲೀಸ್​ ಸ್ಟೇಷನ್​ ಮುಂದೆಯೇ ಚುನಾವಣೆ! ಮುನಿರತ್ನಗೆ ಇದು ಕೊನೇ ವಾರ್ನಿಂಗ್​’

ಊರಿಗೆ ಊರೇ ಕೊಚ್ಚಿಕೊಂಡು ಹೋದರೂ ಸಾಹೇಬ್ರಿಗೆ ಟೆನ್ಶನ್​ ಇಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 8 =
Remember me
