ತುಮಕೂರು:ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್​ ಗೌಡಗೆ ಮತದಾರರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ವೈರಲ್​ ಆಗಿದೆ.
ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣೆ ಕಾವೇರುತ್ತಿದೆ. ಈ ನಡುವೆ ಶಿರಾ ತಾಲೂಕಿನ ಬಂದಗುಂಟೆ ಗ್ರಾಮಕ್ಕೆ ಬಂದ ಸುರೇಶ್ ಗೌಡಗೆ ಸ್ಥಳೀಯರು ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಗ್ಯಾಸ್ ಸಬ್ಸಿಡಿ ಯಾಕೆ ವಾಪಸ್ ತೆಗೆದುಕೊಂಡಿದ್ದೀರಾ? ಬಿಜೆಪಿಯಿಂದ ರೈತರಿಗೆ ಅನುಕೂಲವಾಗಿಲ್ಲ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿರಿಶಿರಾ ಕಣಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂಟ್ರಿ
ಉಪಚುನಾವಣೆ ಹಿನ್ನೆಲೆಯಲ್ಲಿ ಬಂದಗುಂಟೆ ಗ್ರಾಮದಲ್ಲಿ ಜನಾಭಿಪ್ರಾಯ ಸಂಗ್ರಹಿಸಲು ಸುರೇಶ್ ಗೌಡ ಬಂದಿದ್ದರು. ಈ ವೇಳೆ ಆಕ್ರೋಶಗೊಂಡ ಕೆಲ ಸ್ಥಳೀಯ ನಿವಾಸಿಗಳು, ಮದಲೂರು ಕೆರೆಗೆ ಮೊದಲು ನೀರು ಹರಿಸಿ. ಆನಂತರ ಮಾತನಾಡಿ ಎಂದು ತಾಕೀತು ಮಾಡಿದರು. ಅಲ್ಲದೆ ಗ್ಯಾಸ್ ಸಬ್ಸಿಡಿ ಯಾಕೆ ವಾಪಸ್ ತೆಗೆದುಕೊಂಡಿದ್ದೀರಾ? ರೈತರಿಗೆ ನಿಮ್ಮ ಸರ್ಕಾರದಿಂದ ಅನುಕೂಲ ಆಗುತ್ತಿಲ್ಲ ಎಂದು ಕಿಡಿಕಾರಿದರು. ನಿಮ್ದೆ ಸರ್ಕಾರ ಇದೆ. ಮೊದ್ಲು ನಮ್ಮೂರಿನ ಕೆರೆಗೆ ನೀರು ಬಿಡಿಸಿ ಎಂದು ಆಗ್ರಹಿಸಿದರು. ಈ ವೇಳೆ ಮಾಜಿ ಶಾಸಕರು ತಾಳ್ಮೆಯಿಂದಲೇ ಜನರ ಆಕ್ರೋಶಭರಿತ ನುಡಿಗಳನ್ನು ಆಲಿಸಿದರು. ಬಳಿಕ ನಿಮಗೆ ನೀರು ಬಿಡಿಸಬೇಕು ಅಷ್ಟೆ ಅಲ್ವ ಎನ್ನುವ ಮೂಲಕ ನಿಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು. ಈ ದೃಶ್ಯವನ್ನು ಅಲ್ಲೇ ಇದ್ದ ಕೆಲವರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದು, ವೈರಲ್​ ಆಗಿದೆ.
https://www.facebook.com/VVani4U/videos/347533106660334/
ಶಿರಾ ಬೈ ಎಲೆಕ್ಷನ್​ಗೆ ಕಾಂಗ್ರೆಸ್​ನಿಂದ ಉಸ್ತುವಾರಿ ನೇಮಕ

ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 4 =
Remember me
