ಬೆಂಗಳೂರು:”ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿಧಿ. ನಾವು ಅನಿವಾರ್ಯವಾಗಿ ಎದುರಿಸಬೇಕಾದ ನೋವಿನ ಚುನಾವಣೆ ಇದು. ಇತರರು ಇದನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಅವರಿಗೆ ಇದು ಲಾಭ-ನಷ್ಟದ ವಿಚಾರ. ಆದರೆ ನಾವಿಲ್ಲಿ ನಮ್ಮ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಕ ಬಯಸುತ್ತಿದ್ದೇವೆ” ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಶಿರಾ ಕ್ಷೇತ್ರದ ಜೆಡಿಎಸ್​ ಶಾಸಕ ಸತ್ಯನಾರಾಯಣ ಅವರು ಇತ್ತೀಚಿಗೆ ನಿಧನರಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ನವೆಂಬರ್​ 3ರಂದು ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲೇಬೇಕೆಂದು ಮೂರು ಪ್ರಕ್ಷಗಳು ಜಿದ್ದಾಜಿದ್ದಿಗೆ ಬಿದ್ದವರಂತೆ ಹೋರಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಚ್​ಡಿಕೆ, ”ಶಿರಾ ನಾವು ಗೆದ್ದ ಕ್ಷೇತ್ರವೂ ಹೌದು, ಆಪರೇಷನ್ ಕಮಲ ಮೆಟ್ಟಿ ಉಳಿಸಿಕೊಂಡ ಕ್ಷೇತ್ರವೂ ಹೌದು. ಸತ್ಯಣ್ಣ ಇಲ್ಲಿ ಗೆದ್ದಿದ್ದರು. ಬಿಜೆಪಿಯವರ ಆಮಿಷಕ್ಕೆ ಆಕರ್ಷಿತರಾಗದೇ ಕ್ಷೇತ್ರವನ್ನು ಜೆಡಿಎಸ್​ಗೆ ಉಳಿಸಿಕೊಟ್ಟಿದ್ದರು. ಸತ್ಯಣ್ಣ ಇದ್ದಿದ್ದರೆ ಈ ಕ್ಷೇತ್ರ ನಮ್ಮಲ್ಲೇ ಇರುತ್ತಿತ್ತು. ನ್ಯಾಯಬದ್ಧವಾಗಿ ಶಿರಾ ನಾವೇ ಗೆಲ್ಲಬೇಕಾದ ಕ್ಷೇತ್ರ” ಎಂದು ಭಾವನಾತ್ಮಕವಾಗಿ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.ಇದನ್ನೂ ಓದಿರಿರಾಜರಾಜೇಶ್ವರಿ ನಗರ, ಶಿರಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ
”ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಶಿರಾ ನಮ್ಮದೇ ಕ್ಷೇತ್ರ. ರಾಜರಾಜೇಶ್ವರಿ ನಗರವೂ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಅಚಲವಾಗಿದೆ. ಸೂಕ್ತ, ನ್ಯಾಯ ಸಮ್ಮತ ಅಭ್ಯರ್ಥಿಗಳನ್ನು ಶೀಘ್ರವೇ ಪಕ್ಷ ಘೋಷಿಸುತ್ತದೆ” ಎಂದು ಕುಮಾರಸ್ವಾಮಿ ಹೇಳಿದರು.
ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿಧಿ. ನಾವು ಅನಿವಾರ್ಯವಾಗಿ ಎದುರಿಸಬೇಕಾದ ನೋವಿನ ಚುನಾವಣೆ ಇದು. ಇತರರು ಇದನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಅವರಿಗೆ ಇದು ಲಾಭ-ನಷ್ಟದ ವಿಚಾರ. ಆದರೆ ನಾವು ಇಲ್ಲಿ ನಮ್ಮ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಕ ಬಯಸುತ್ತೇವೆ.3/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)September 30, 2020

ಶಿರಾ, ರಾಜರಾಜೇಶ್ವರಿ ನಗರಕ್ಕೆ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 4 =
Remember me
