ಬೆಂಗಳೂರು:ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್​ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ನಡೆದ ತುಮಕೂರು ಜಿಲ್ಲಾ ಕಾಂಗ್ರೆಸ್​ ಮುಖಂಡರ ಸಭೆಯಲ್ಲಿ ಅಭ್ಯರ್ಥಿಯನ್ನಾಗಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ‘ರಾಜಣ್ಣ ಅವರೇ ಜಯಚಂದ್ರರ ಹೆಸರನ್ನು ಸೂಚಿಸಿದ್ದಾರೆ. ಅವರ ಅಭಿಪ್ರಾಯ ಪಡೆದಿದ್ದು, ಇದನ್ನೇ ಪಕ್ಷದ ಹೈಕಮಾಂಡ್​ಗೆ ಕಳುಹಿಸಿಕೊಡುತ್ತೇವೆ’ ಎಂದು ತಿಳಿಸಿದರು.ಇದನ್ನೂ ಓದಿರಿಶಿರಾ ಬೈ ಎಲೆಕ್ಷನ್​; ಕಾಂಗ್ರೆಸ್​ ಸಭೆಯಲ್ಲಿ ಅಸಮಾಧಾನದ ಹೊಗೆ
‘ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಯಿತು. ಶಿರಾ ಉಪಚುನಾವಣೆಯನ್ನು ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ ಎದುರಿಸಲು ತೀರ್ಮಾನಿಸಿದ್ದು, ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಕೋಚೇರ್ಮನ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಇಂದಿನಿಂದ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ’ ಎಂದು ಡಿಕೆಶಿ ವಿವರಿಸಿದರು.
ಶಿರಾ ಬೈ ಎಲೆಕ್ಷನ್​ಗೆ ಕಾಂಗ್ರೆಸ್​ನಿಂದ ಉಸ್ತುವಾರಿ ನೇಮಕ

ಶಿರಾ ಉಪಚುನಾವಣೆಯನ್ನೇಕೆ ಇಷ್ಟೊಂದು ಸೀರಿಯಸ್ಸಾಗಿ ತಗೊಂಡಿದ್ದಾರೆ ಎಚ್​ಡಿಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
