ತುಮಕೂರು:ಉಚಿತ ಹೆಲ್ಮೆಟ್​ಗಾಗಿ ನಾ ಮುಂದು- ತಾ ಮುಂದು ಎಂಬಂತೆ ನೂರಾರು ಜನ ಮುಗಿಬಿದ್ದು ಹೆಲ್ಮೆಟ್​ ಪಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಈ ಘಟನೆ ಸಂಭವಿಸಿದೆ. ಶಿರಾ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಉಗ್ರೇಶ್, ನಗರದ ವಾಹನ ಸವಾರರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿದರು. ಕೆಲ ದಿನಗಳ ಹಿಂದೆ ರಸ್ತೆ ನಿಯಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉಗ್ರೇಶ್​ ಆಯೋಜಿಸಿದ್ದರು. ಬಳಿಕ ಬೈಕ್​ ಸವಾರರಿಗೆ ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಫ್ರೀಯಾಗಿ ಹೆಲ್ಮೆಟ್​ ಸಿಗುತ್ತೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಮಂದಿ ಸ್ಥಳಕ್ಕೆ ಜಮಾಯಿಸಿದ್ದರು. ನನಗೊಂದು, ನನಗೊಂದು.. ಎಂದು ಮುಗಿಬಿದ್ದು ಹೆಲ್ಮೆಟ್ ಪಡೆಯುತ್ತಿದ್ದರು. ಪರಿಣಾಮ ನಗರದ ಪ್ರವಾಸ ಮಂದಿರದ ಸರ್ಕಲ್​ನಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜನರನ್ನು ನಿಯಂತ್ರಿಸಲು ಆಗದೆ ಆಯೋಜಕರು ಕಾರ್ಯಕ್ರಮವನ್ನು ಅರ್ಧಕ್ಕೇ ನಿಲ್ಲಿಸಿದರು. ಬಳಿಕ ಹಲವರು ನಿರಾಸೆಯಿಂದ ಹಿಂತಿರುಗಿದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ: ಎಚ್​ಡಿಕೆ ಘೋಷಣೆ

ನೂತನ ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್​ ಅಧಿಕಾರಿ ಅರುಣ್​ ಗೋಯೆಲ್​ ಅಧಿಕಾರ ಸ್ವೀಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
