ಬೆಂಗಳೂರು:ಮಂಗಳೂರು ಸೇರಿದಂತೆ ಕರಾವಳಿ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ಸೇರಿ 7 ಘಾಟ್‌ಗಳ ರಸ್ತೆ ಅಭಿವೃದ್ಧಿಗೆ ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ಕ್ರಮ ವಹಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಮೇಲ್ಮನೆಯಲ್ಲಿ ತಿಳಿಸಿದ್ದಾರೆ.ಬಿಜೆಪಿಯ ಪ್ರತಾಪ ಸಿಂಹ ನಾಯಕ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು,7 ಘಾಟಿ ರಸ್ತೆಯಲ್ಲಿ 5 ರಾಷ್ಟ್ರೀಯ ಹೆದ್ದಾರಿಗೆ, ಇನ್ನೆರಡು ರಾಜ್ಯಕ್ಕೆ ಸೇರುತ್ತವೆ ಎಂದರು.ಈ ರಸ್ತೆಯಲ್ಲಿ ಓಡಾಡಲು ಆತಂಕ ಸೃಷ್ಟಿಸಿದೆ, ಶಿರೂರಿನ ರೀತಿ ಗುಡ್ಡ ಕುಸಿತ ಭೀತಿ ಇದೆ. ಹೀಗಾಗಿ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿ ಒಂದು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಬಾರಿ ಹೆಚ್ಚಿನ ಮಳೆಯಾದ್ದರಿಂದ ಈ ಸಮಸ್ಯೆಯಾಗಿದೆ. ಕೇಂದ್ರ ಸರ್ಕಾರಕ್ಕೆ ನಾವು ಪ್ರಸ್ತಾವನೆ ಮಾಡಬಹುದು ಎಂದರು.ಕರಾವಳಿಗೆ ಸಂಪರ್ಕ ಕೊಂಡಿಯಾಗಿರುವ ಘಾಟಿ ಪರಿಸರದಲ್ಲಿನ ಹೆದ್ದಾರಿಯಲ್ಲಿ ಹೆಚ್ಚು ಮಳೆಯಿಂದಾಗಿ ರಸ್ತೆ ಕುಸಿತದಿಂದ ಸಂಚಾರ ವ್ಯತ್ಯಯ ಉಂಟಾಗುತ್ತಿದೆ ಎಂದು ನಾಯಕ್ ಗಮನ ಸೆಳೆದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 3 =
Remember me
