ಬೆಂಗಳೂರು:ಹ್ಯಾಟ್ರಿಕ್‌ ಹಿರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಅವಹೇಳನಕಾರಿ ಹೇಳಿಕೆ: ಬಿಜೆಪಿ ಸಂಸದ ದಿಲೀಪ್ ಘೋಷ್, ಕಾಂಗ್ರೆಸ್‌ನ ಸುಪ್ರಿಯಾಗೆ ಇಸಿ ಎಚ್ಚರಿಕೆ
ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್​ ಕುಮಾರ್​ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ.
ಆಗಿದ್ದೇನು?:ದೇವನಹಳ್ಳಿ ಬಳಿ ಚಿತ್ರೀಕರಣದ ವೇಳೆ ಸುಸ್ತಾಗ್ತಿದೆ ಎಂದ ಶಿವರಾಜ್​ ಕುಮಾರ್ ಅವರು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು ಕೆಲವು ಪರೀಕ್ಷೆಗಳನ್ನು ಮಾಡಿಸಿ ವರದಿ ಪಡೆದು ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಭಾನುವಾರ ಮತ್ತೆ ಶೂಟಿಂಗ್ ಸೆಟ್​ನಲ್ಲಿ ಧೂಳು ಆವರಿಸಿ ಮತ್ತೆ ಸುಸ್ತಾಗಿದ್ದಾರೆ ಎನ್ನಲಾಗಿದೆ. ಶಿವಣ್ಣ ಮತ್ತೆ (ಇಂದು) ಸೋಮವಾರ ಚಿಕಿತ್ಸೆ ಆಸ್ಪತ್ರೆಗೆ ತೆರಳಿದಿದ್ದಾರೆ. ಒಂದು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ವೈದ್ಯರ ಸೂಚನೆ ನೀಡಿದ್ದರಿಂದ ಶಿವರಾಜ್​ ಕುಮಾರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವರಾಜ್​ ಕುಮಾರ್​ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ. ಮಂಗಳವಾರ ಬೆಳಗ್ಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
IPL 2024: ರೋಹಿತ್ ಶರ್ಮಾ ವಿಕೆಟ್​ಗೆ​ ಸಂಭ್ರಮಿಸಿದ್ದ ಸಿಎಸ್​ಕೆ ಅಭಿಮಾನಿಯನ್ನು ಕೊಲೆಗೈದ MI ಫ್ಯಾನ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
