ಶಿವಮೊಗ್ಗ:ಸ್ಯಾಂಡಲ್​ವುಡ್​​ ನಟ ಯುವ ರಾಜ್​ಕುಮಾರ್​ ಅವರು ಪತ್ನಿ  ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್​ ನೀಡಲು ಅರ್ಜಿಸಲ್ಲಿಸಿದ್ದಾರೆ. ಈ ಕುರಿತಾಗಿ ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.
ಶಿವಮೊಗ್ಗದಲ್ಲಿ ಶಿವಣ್ಣ ಮಾತನಾಡಿ ʻಯುವ ಡಿವೋರ್ಸ್‌ ಕುರಿತಾಗಿ ನಮಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ. ಬೇಸರ ಇದೆ, ಗೊತ್ತಿದ್ದು ಮಾತಾನಾಡಬೇಕು. ನೀವು ಹೇಳಿದ ಮೇಲೆ ಈ ವಿಚಾರ ಗೊತ್ತಾಗಿದ್ದು. ಗೊತ್ತಿಲ್ಲದೇ ಏನೂ ಮಾತಾನಾಡಬಾರದು. ಅದು ಅವರ ಬದುಕು. ಮನೆಗೆ ಹೋಗಿ ಈ ಬಗ್ಗೆ ಯುವ ಜತೆ ಮಾತನಾಡುತ್ತೇವೆʼʼಎಂದು ಹೇಳಿಕೆ ನೀಡಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಮಾತನಾಡಿ ʻʻಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದುʼʼಎಂದರು.
MC ಌಕ್ಟ್ ಸೆಕ್ಷನ್ 13(1)(ia) ಅಡಿಯಲ್ಲಿ ಯುವ ರಾಜ್‌ಕುಮಾರ್ ಅವರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಯುವರಾಜ್ ಕುಮಾರ್ ಅರ್ಜಿಯ ಹಿನ್ನೆಲೆಯಲ್ಲಿ ಯುವ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ವಿಚ್ಛೇದನದ ಕೇಸ್‌ನಲ್ಲಿ ಫ್ಯಾಮಿಲಿ ಕೋರ್ಟ್ ಮುಂದಿನ ಜುಲೈ ತಿಂಗಳ 4ನೇ ತಾರೀಕಿಗೆ ವಿಚಾರಣೆ ನಿಗದಿ ಮಾಡಿದೆ.
2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಯುವರಾಜ್​ ಕುಮಾರ್​ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ. ಸದ್ಯಕ್ಕೆ ಅಮೆರಿಕಾದಲ್ಲಿ ಶ್ರೀದೇವಿ ನೆಲೆಸಿದ್ದಾರೆ. ಶಾಂತಿನಗರ ಫ್ಯಾಮಿಲಿ ಕೋರ್ಟ್‌ನಲ್ಲಿ ಇದೇ ತಿಂಗಳು 6ನೇ ತಾರೀಕು ವಿಚ್ಛೇದನ ಅರ್ಜಿ ಸಲ್ಲಿಸಿದ್ದರು ಯುವರಾಜ್.
ಖ್ಯಾತ ಬಾಲಿವುಡ್‌ ನಟಿ ನೂರ್‌ ಮಾಳವಿಕಾ ದಾಸ್‌ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
