ಹಾಸನ:ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದ್ದು ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡುತ್ತಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಒಂದು ವೇಳೆ ಪ್ರಾಸಿಕ್ಯೂಷನ್​ಗೆ ಅವಕಾಶ ನೀಡಿದರೆ ರಾಜ್ಯದಲ್ಲಿ ರಕ್ತಕ್ರಾಂತಿಯಾಗುತ್ತದೆ ಎಂದು ಕಾಂಗ್ರೆಸ್​ ಶಾಸಕರೊಬ್ಬರು ಎಚ್ಚರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದಂತೆ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ಅರಸೀಕೆರೆ ಶಾಸಕ ಶಿವಲಿಂಗೇಗೌಡ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರವನ್ನು ಅಲುಗಾಡಿಸಿದರೆ ರಕ್ತಕ್ರಾಂತಿ ಆಗುತ್ತೆ ಎಚ್ಚರದಿಂದ ಇರಿ. ನಿಮಗೆ ಏನಾದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಆಲೋಚನೆ ಇದ್ದರೆ ಅದನ್ನು ಹಿಂಪಡೆದುಕೊಳ್ಳಿ. ಒಂದು ವೇಳೆ  ಪ್ರಾಸಿಕ್ಯೂಷನ್‌ಗೆ ನೋಟಿಸ್ ಕೊಟ್ಟರೆ ರಕ್ತಕ್ರಾಂತಿ ಆಗುತ್ತದೆ.
ಇದನ್ನೂ ಓದಿ:ನಿಜವಾಗಿಯೂ ನಿರಾಸೆಯಾಗಿದೆ; ತಂಡ ಗೆದ್ದರೂ ಬೇಸರ ಹೊರಹಾಕಿದ ಯುವ ಆಟಗಾರ
ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಎಂದಿಗೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬಂದಿಲ್ಲ. ಈ ಬಾರಿಯೂ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಮುಂದಾಗಿದ್ದು, ಇದು ನಡೆದರೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ, ರಾಜ್ಯದಲ್ಲಿ ರಕ್ತಕ್ರಾಂತಿ ಆಗುತ್ತೆ. ಇದಕ್ಕೆ ನಾವು ತಯಾರಾಗಿದ್ದೇವೆ ಎಂದು ಹೇಳಿದ್ದಾರೆ.
136 ಸೀಟ್ ಬಂದಿರುವ ಸರ್ಕಾರವನ್ನು ಅನ್ಯ ಮಾರ್ಗದಲ್ಲಿ ತಗೆಯಲು ಹೋದರೆ ಈ ರಾಜ್ಯದಲ್ಲಿ ಯುದ್ದನೇ ಆಗುತ್ತೆ. ಬಿಜೆಪಿಯವರಿಗೆ ಇದು ನಮ್ಮ ಎಚ್ಚರಿಕೆ. ಎರಡು ಬಾರಿ ನಿಮ್ಮ ಆಟ ನೋಡಿದ್ದೇವೆ. ಈ ಬಾರಿ ನಿಮ್ಮ ಆಟ ನಡೆಯಲ್ಲ. ರಾಜ್ಯದಲ್ಲಿ ಯುದ್ದನೇ ಮಾಡಬೇಕಾಗುತ್ತೆ. ಅನಿವಾರ್ಯ ಘಟನೆ ನಡೆದರೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಯುದ್ಧಕ್ಕೆ ತಯಾರಾಗಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಕರೆ ನೀಡಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:eighteen + 16 =
Remember me
