ಬೆಂಗಳೂರು:ಕಾಲಿನಲ್ಲಿ ಇದ್ದಕ್ಕಿದ್ದಂತೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಮ್ಮೂರಿಗೆ ತೆರಳಿ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್​ ಕಾನ್ಸ್​ಟೆಬಲ್​ ಚಿಕಿತ್ಸೆ ಫಲಕಾರಿಯಾಗದೇ ದುರಂತ ಸಾವಿಗೀಡಾಗಿದ್ದಾರೆ.
ಜೀವನ್​ ಮೃತ ಕಾನ್ಸ್​ಟೆಬಲ್​. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಮನೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕಾಲು ನೋವು ಕಾಣಿಸಿಕೊಂಡಿತು. ತಕ್ಷಣ ತಮ್ಮ ಊರಾದ ಶಿವಮೊಗ್ಗಕ್ಕೆ ತೆರಳಿದರು.
ಇದನ್ನೂ ಓದಿ:ನಾಯಕತ್ವವಿಲ್ಲದೆ ಕಳಾಹೀನ: 18ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಗಾಳಿ ಸಾಧ್ಯತೆ
ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಜೀವನ್​ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಕಾಲು ನೋವು ಮತ್ತಷ್ಟು ಹೆಚ್ಚಾದ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆಪರೇಷನ್ ಮಾಡಿದ್ರೂ ಚಿಕಿತ್ಸೆ ಫಲಕಾರಿಯಾಗದೆ‌ ಜೀವನ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಾ ಕುಟುಂಬದ ಆಧಾರವಾಗಿದ್ದ ಜೀವನ್​ ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಬರಸಿಡಿಲಂತೆ ಅಪ್ಪಳಿಸಿದೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್​​)
ಅಭಿವೃದ್ಧಿ ಕಾರ್ಯಕ್ಕಿಂತ ಗ್ಯಾರಂಟಿ ಜಾರಿಗೇ ನಮ್ಮ ಮೊದಲ ಆದ್ಯತೆ: ಸಚಿವ ಡಾ.ಜಿ. ಪರಮೇಶ್ವರ್

500 ರೂ. ಹಂಚಿಕೊಳ್ಳುವ ವಿಚಾರಕ್ಕೆ ಗಲಾಟೆ; ಸ್ನೇಹಿತನ ಕೊಲೆ ಮಾಡಿದವನ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + two =
Remember me
