ಶಿವಮೊಗ್ಗ:ಭದ್ರಾವತಿಯಲ್ಲಿ ಇತ್ತೀಚೆಗೆ ನಡೆದ ಗಲಭೆಗೆ ಸಂಬಂಧಿಸಿದಂತೆ ಶಾಸಕ ಬಿ.ಕೆ.ಸಂಗಮೇಶ್ವರ ಪುತ್ರನನ್ನು ಪೊಲೀಸರು ಚಿತ್ರದುರ್ಗದಲ್ಲಿ ಬಂಧಿಸಿದ್ದಾರೆ.
ಬಸವರಾಜ್ ಬಂಧಿತ. ಕಳೆದ ಫೆ.೨೮ರಂದು ರಾತ್ರಿ ಕನಕ ಮಂಟಪದಲ್ಲಿ ಗಲಭೆ ನಡೆದಿತ್ತು. ಬಿಜೆಪಿ ಕೆಲ ಮುಖಂಡರು ಸೇರಿ ಹಲವರ ಮೇಲೆ ಶಾಸಕ ಸಂಗಮೇಶ್ವರ, ಶಾಸಕರ ಪುತ್ರ ಬಸವರಾಜ ಸೇರಿ ಹಲವರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು.
ಶಾಸಕ ಸಂಗಮೇಶ್ ಸೇರಿದಂತೆ ಅವರ ಬೆಂಬಲಿಗರು ಮತ್ತು ಕುಟುಂಬಸ್ಥರ ಮೇಲೆ ಜಾತಿ ನಿಂದನೆ ಮತ್ತು ಕೊಲೆ ಯತ್ನ ಪ್ರಕರಣಗಳು ದಾಖಲಾಗಿದ್ದವು.
ಇದನ್ನೂ ಓದಿರಿ:15ರ ವಿದ್ಯಾರ್ಥಿ ಜತೆ 35ರ ಶಿಕ್ಷಕಿಯ ಸರಸ: ಈಕೆಯ ಮಹಾ ಸುಳ್ಳುಗಳಿಗೆ ಅಂತ್ಯವಾಡಿದ ಕೋರ್ಟ್​!
ಗಲಭೆಗೆ ಸಂಬಂಧಿಸಿದಂತೆ ಪರ-ವಿರೋಧ ವ್ಯಕ್ತವಾಗಿತ್ತು. ವಿಧಾನ ಮಂಡಲ ಅಧಿವೇಶನದಲ್ಲೂ ಪ್ರತಿಧ್ವನಿಸಿತ್ತು. ಶಾಸಕ ಸಂಗಮೇಶ್ವರ ಅಂಗಿ ಬಿಚ್ಚಿ ಪ್ರತಿಭಟಿಸಿದ್ದರು. ಈ ನಡುವೆ ಹಲ್ಲೆ ನಡೆಸಿದವರ ಬಂಧನಕ್ಕೆ ಒತ್ತಡ ಹೆಚ್ಚಾಗಿತ್ತು.
ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಭದ್ರಾವತಿ ಹಳೇ ಪೇಪರ್ ಟೌನ್ ಪೊಲೀಸರು ಶನಿವಾರ ಬೆಳಗ್ಗೆ ಚಿತ್ರದುರ್ಗದಲ್ಲಿದ್ದ ಬಸವರಾಜನನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ ೧೫ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + nine =
Remember me
