ಶಿವಮೊಗ್ಗ:ಶವಗಾರದಲ್ಲಿ ವಿದ್ಯುತ್ ಇಲ್ಲದೇ ಪರದಾಡುತ್ತಿರುವ ವೈದ್ಯರು, ಹೆಡ್​​ ಲ್ಯಾಂಪ್​​ ಬೆಳಕಿನಲ್ಲಿಯೇ ಮರಣೋತ್ತರ ಪರೀಕ್ಷೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಈ ಘಟನೆ ನಡೆದಿದೆ.
ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಮೃತದೇಹದ ಮರಣೋತ್ತರ ತಪಾಸಣೆಗೆ ತಂದಾಗ ವೈದ್ಯರು ಮೊಬೈಲ್ ಟಾರ್ಚ್ ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ನಡೆದಿದ್ದಾರೆ.

ಇದನ್ನೂ ಓದಿ: ಕೆ.ಜಿ.ಗಟ್ಟಲೆ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವುದು ಈ ಕುಟುಂಬದ ಸಂಪ್ರದಾಯವಂತೆ!
ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಜನರು ಆಕ್ರೋಶವ್ಯಕ್ತಪಡಿಸಿದ್ದಾರೆ. ಹಗಲು ವೇಳೆಯಲ್ಲಿ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿರುವ ಈ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರುವುದಿಲ್ಲ. ಈ ಬಗ್ಗೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ವೈಧ್ಯಾಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ.

ಮೇಲಾಧಿಕಾರಿಗಳ ನಿರ್ಲಕ್ಷ್ಯವೇ ಇಷ್ಟಕ್ಕೆಲ್ಲ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ರಸ್ತೆ ಬದಿ ಎಳನೀರು ಕುಡಿಯೋ ಅಭ್ಯಾಸ ಇದ್ಯಾ?; ಚರಂಡಿ ನೀರನ್ನು ಚುಮುಕಿಸಿ ಕೊಡ್ತಾರೆ ಹುಷಾರ್​​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 1 =
Remember me
