ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ಪೋಲೀಸರ ಮೇಲೂ ಕಲ್ಲು ತೂರಾಟ ಮಾಡಿದ್ದರಿಂದ ಲಾಠಿ ಚಾರ್ಜ್ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ‌ 43 ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಹೇಳಿದರು.
ಗಾಂಧೀಜಿ ಜಯಂತಿ ನಿಮಿತ್ತ ವಿಧಾನಸೌಧ ಆವರಣದಲ್ಲಿ ಗಾಂಧೀಜಿ ಪ್ರತಿಮೆಗೆ ಸೋಮವಾರ ಗೌರವ ನಮನ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಗಲಾಟೆ ತಡೆಯಲು ಪೊಲೀಸರು ಸೂಕ್ತ ಕ್ರಮವಹಿಸಿದ್ದು, ಪರಿಸ್ಥಿತಿ ಶಾಂತಿಯುತವಾಗಿದೆ. ಧರ್ಮ ಹಾಗೂ ದೇವರ‌ ಹೆಸರಿನಲ್ಲಿ ಇಂತಹ ದುಷ್ಕೃತ್ಯ ಎಸಗುವವರನ್ನು ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಶಿವಮೊಗ್ಗ ಘಟನೆಗೆ ಪ್ರತಿಕ್ರಿಯೆ ನೀಡುವ ಮುನ್ನ ಗಾಂಧೀಜಿ, ಲಾಲ್ ಬಹದೂರ ಶಾಸ್ತ್ರಿ ಜನ್ಮ ದಿನದ ನಿಮಿತ್ತ ಮಹಾನ್ ನಾಯಕರಿಬ್ಬರಿಗೆ ಗೌರವ ನಮನ ಸಲ್ಲಿಸಲಾಗಿದೆ.ಜಗತ್ತಿನ 148 ದೇಶಗಳಲ್ಲಿ ಗಾಂಧಿಯವರ ಪ್ರತಿಮೆಗಳಿವೆ. ಸತ್ಯ, ಅಹಿಂಸಾ ತತ್ವ ಪ್ರತಿಪಾದಕರು. ಎಲ್ಲರೂ ಶಾಂತಿಯುತವಾಗಿ ಸಹಬಾಳ್ವೆ ನಡೆಸಬೇಕೆಂದು ಬಯಸಿದವರು. ಗಾಂಧೀಜಿ ವಿಶ್ವ ನಾಯಕರು ಎಂದು ಸಿದ್ದರಾಮಯ್ಯ ಹೇಳಿದರು.
ಗಾಂಧೀಜಿ ಸದಾ ಸಮಾಜದ ಕಟ್ಟಕಡೆಯ ವ್ಯಕ್ತಿ ರೀತಿಯಲ್ಲಿ ಅತ್ಯಂತ ಸರಳ ಜೀವನ ನಡೆಸಿದರು. ಅಹಿಂಸಾ ಚಳವಳಿ ಮುಖೇನ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ದೇಶ ವಿಭಜನೆ ತಡೆಯಲು ಸಾಕಷ್ಟು ಪ್ರಯತ್ನಿಸಿದರು. ಅವರ ತತ್ವಾದರ್ಶಗಳು ನಮಗೆಲ್ಲ ಸ್ಫೂರ್ತಿದಾಯಕವಾಗಿವೆ ಎಂದರು.
ಲಾಲ ಬಹದೂರ ಶಾಸ್ತ್ರಿಯವರು ಅತ್ಯಂತ ಪ್ರಾಮಾಣಿಕ, ಸರಳ ಜೀವನ ನಡೆಸಿದವರು. ದೇಶದ ಪ್ರಧಾನಿಯಾಗಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ದೇಶದ ಭದ್ರತೆ, ಸಮಗ್ರತೆಗೆ ಒತ್ತು ನೀಡಿದವರು. ಅವರ ಪ್ರಾಮಾಣಿಕತೆ, ಸರಳತೆ, ಆದರ್ಶದ ಮೌಲ್ಯಗಳು ಮೇಲ್ಪಂಕ್ತಿಯಾಗಿವೆ ಎಂದು ಸಿದ್ಸರಾಮಯ್ಯ ತಿಳಿಸಿದರು.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಇನ್ನಿತರರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 13 =
Remember me
