ಶಿವಮೊಗ್ಗ:ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ.ತಿಮ್ಮಪ್ಪ ಹೆಗಡೆ (94) ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ (ಜ.17) ಬೆಳಗ್ಗೆ ಕೊನೆಯುಸಿರೆಳೆದರು.
ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಸ್ವಗ್ರಾಮ ಮಡಸೂರಿನಲ್ಲಿ ನಿಧರಾದರು. ತಿಮ್ಮಪ್ಪ ಅವರು 1978 ಹಾಗೂ 1983ರ ಚುನಾವಣೆಯಲ್ಲಿ ಗೆದ್ದು ಎರಡು ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ರಲ್ಲಿ ಜನತಾ ಪಕ್ಷದಿಂದ ಸ್ಫರ್ಧಿಸಿದ್ದ ಕಾಗೋಡು ತಿಮ್ಮಪ್ಪ ವಿರುದ್ಧ ಕಾಂಗ್ರೆಸ್​ನಿಂದ ಸ್ಫರ್ಧಿಸಿ ಎಲ್.ಟಿ.ತಿಮ್ಮಪ್ಪ ಹೆಗಡೆ ಗೆಲುವು ಸಾಧಿಸಿದ್ದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಸಾಗರ ಪ್ರಾಂತ್ಯದಲ್ಲಿ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ ಸೇರಿದಂತೆ ಅನೇಕ ಸಂಸ್ಥೆಗಳನ್ನು ಹುಟ್ಟು ಹಾಕುವಲ್ಲಿ ತಿಮ್ಮಪ್ಪ ಅವರು ಪ್ರಮುಖ ಪಾತ್ರ ವಹಿಸಿದ್ದರು.
ತಿಮ್ಮಪ್ಪ ಅವರ ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ನೆರವೇರಲಿದೆ.(ದಿಗ್ವಿಜಯ ನ್ಯೂಸ್​)
ಅನಗತ್ಯ ಹುದ್ದೆ ಕಡಿತ ಶುರು: ಸಹಕಾರ ಇಲಾಖೆಯಲ್ಲಿ 300ಕ್ಕೂ ಹೆಚ್ಚು ಹುದ್ದೆಗಳ ರದ್ದು

ಮತ್ತೊಮ್ಮೆ ವಿಜಯ್​ ಜೊತೆ ಹಾಟ್​ ಆಗಿ ಕಾಣಿಸಿಕೊಂಡ ತಮನ್ನಾ: ಬೇಸರ ಹೊರಹಾಕಿದ ಅಭಿಮಾನಿಗಳು

ನೇಪಾಳ ವಿಮಾನ ಪತನ: ಭಾರತೀಯ ಪ್ರಯಾಣಿಕನ ಫೇಸ್​ಬುಕ್​ ಲೈವ್​ನಲ್ಲಿ ಭಯಾನಕ ದೃಶ್ಯ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 5 =
Remember me
