ಶಿವಮೊಗ್ಗ:ವೆಡ್ಡಿಂಗ್ ಫೋಟೋಶೂಟ್​​ ವೇಳೆ ಮಾವುತ ಅಯಾತಪ್ಪಿ ಆನೆ ಮೇಲಿಂದ ಬಿದ್ದ ಘಟನೆ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್ ಆನೆ ಬಿಡಾರದಲ್ಲಿ ನಡೆದಿದೆ.
ಸಕ್ರೆಬೈಲ್ ಆನೆ ಬಿಡಾರದಲ್ಲಿ ನವಜೋಡಿಗಳ ಪ್ರಿ ವೆಡ್ಡಿಂಗ್ ಫೋಟೋಶೂಟ್​​ ವೇಳೆ ಕುಂತಿ ಆನೆ ಮುಂಬಂದಿಯಲ್ಲಿ ನವ ಜೋಡಿಗಳು ಹೋಗುವ ದೃಶ್ಯ ಸೆರೆ ಹಿಡಿಯುವ ವೇಳೆ ದ್ರುವ ಆನೆ ಮರಿ ಏಕಾಏಕಿ ತಾಯಿ ಕುಂತಿ ಬಳಿ ಬಂದಿದೆ. ಆಗ ತಕ್ಷಣ ಕುಂತಿ ತಿರುಗಿದಾಗ ಆಯತಪ್ಪಿ ಮಾವುತ ಸಂಶುದ್ದಿನ್ ಕೆಳಗೆ ಬಿದ್ದಿದ್ದಾರೆ. ಮಾವುತ ಕೆಳಕ್ಕೆ ಬಿಳುತ್ತಿದ್ದಂತೆ ಫೋಟೋ ಶೂಟಿಂಗ್‌ನಲ್ಲಿದ್ದ ಯುವಕ ಯುವತಿ ಗಾಬರಿಯಿಂದ ಓಡಿಹೋಗಿದ್ದಾರೆ. ಈ ಘಟನೆಯಿಂದ ಆನೆ ಬಿಡಾರದಲ್ಲಿ ಕೆಲವೊತ್ತು ಭಯದ ವಾತಾವರಣ ನಿರ್ಮಾಣವಾಗಿತ್ತು.
ಮಾವುತ ಸಂಶುದ್ದೀನ್  ಕೈ ಹಾಗೂಗು ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಆಗ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಪೂರ್ಣ ಘಟನಾವಳಿಯನ್ನು ಬಿಡಾರಕ್ಕೆ ಬಂದಿದ್ದ ಪ್ರವಾಸಿಗರೊಬ್ಬರೂ ಚಿತ್ರೀಕರಿಸಿ ಸೋಷಿಯಲ್ ಮಿಡಿಯಾದಲ್ಲಿ ಹರಿ ಬಿಟ್ಟಿದ್ದಾರೆ.
ಮಾವುತ ಷಂಶುದ್ದೀನ್​​ ಕೈ ಮೂಳೆ ಭಾಗಕ್ಕೆ ಪೆಟ್ಟಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಆಶ್ಪತ್ರೆಗೆ ಭೇಟಿ ನೀಡಿ, ಮಾವುತನ ಆರೋಗ್ಯ ವಿಚಾರಿಸಿದ್ದಾರೆ.
ಸಕ್ರೆಬೈಲು ಆನೆ ಬಿಡಾರದಲ್ಲಿ ವೆಡ್ಡಿಂಗ್ ಶೂಟಿಂಗ್ ಅವಕಾಶ ಇದೆಯಾ?:ನಿಜಕ್ಕೂ ಸರ್ಕಾರದ ನಿಯಮಾವಳಿ ಪ್ರಕಾರ, ಆನೆ ಕ್ಯಾಂಪ್ ಗಳಲ್ಲಿ ಪ್ರಿ ವೆಡ್ಡಿಂಗ್ ಶೂಟಿಂಗ್ ಗಳಿಗೆ ಅವಕಾಶ ಇದೆಯಾ ಎಂಬುದು ಪ್ರಶ್ನೆ ನೆಟ್ಟಿಗರಿಂದ ವ್ಯಕ್ತವಾಗಿದೆ. ಸಿನಿಮಾಗಳ ಚಿತ್ರೀಕರಣಕ್ಕೆ ಕಾನೂನು ನಿಯಮದಂತೆ ಇಂತಿಷ್ಟು ಹಣ ಕಟ್ಟಿಸಿಕೊಂಡು, ಶೂಟಿಂಗ್ ಗೆ ಅವಕಾಶ ಕಲ್ಪಿಸಲಾಗುತ್ತದೆ. ಆದರೆ ವೆಡ್ಡಿಂಗ್ ಶೂಟಿಂಗ್ ಅವಕಾಶ ಇದೆಯಾ  ಪ್ರಶ್ನೆ ಮೂಡಿವೆ.
ಅವಳಿ ಮಕ್ಕಳಿಗೆ ಜನ್ಮ ನೀಡಿದ 70 ವರ್ಷದ ಮಹಿಳೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 2 =
Remember me
